ನವದೆಹಲಿ: 2024ರ ಲೋಕಸಭಾ ಚುನಾವಣೆ ವೇಳೆ ನಡೆದ ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ವಿಡಿಯೊ ಬಿಡುಗಡೆ ಮಾಡಿದ್ದಾರೆ.

ಗುರುವಾರ ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಹುಲ್ ಮತ ಕಳ್ಳತನ ಕುರಿತು ದಾಖಲೆ ಬಿಡುಗಡೆ ಮಾಡಿದ್ದರು.

ಮತ ಕಳ್ಳತನಕ್ಕೆ ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಬಹಿರಂಗ ಒಪ್ಪಂದ ಮಾಡಿಕೊಂಡಿದ್ದು, ದೇಶದ ಅತಿ ದೊಡ್ಡ ಚುನಾವಣಾ ಹಗರಣ ಇದಾಗಿದೆ ಎಂದು ರಾಹುಲ್ ಆರೋಪಿಸಿದ್ದಾರೆ.

ಇದು ಕೇವಲ ಚುನಾವಣಾ ಹಗರಣ ಮಾತ್ರವಲ್ಲ, ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ಮಾಡಿದ ವಂಚನೆಯಾಗಿದೆ ಎಂದು ಹೇಳಿದ್ದಾರೆ.

ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಎಂದು ರಾಹುಲ್, ಪುರಾವೆಗಳನ್ನು ಮುಂದಿಟ್ಟುಕೊಂಡು ಹೇಳಿದ್ದಾರೆ.

2024ರ ಚುನಾವಣೆಯ ಸಮಯದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1,00,250 ಮತಗಳ ಕಳ್ಳತನ ನಡೆದಿದೆ. ಇದೇ ರೀತಿಯಲ್ಲಿ ದೇಶದಲ್ಲಿ 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮತ ಕಳ್ಳತನ ನಡೆದಿರುವ ಬಗ್ಗೆ ನಂಬಿಕೆಯಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗಷ್ಟೇ ಮತ ಕಳವಿನ ಕುರಿತು 'ಅಣು ಬಾಂಬ್' ಸಿಡಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ದರು.
.ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ 39 ಲಕ್ಷ ‘ಮತದಾರರ’ ಸೇರ್ಪಡೆ: ರಾಹುಲ್.ಲಕ್ಷ ಮತ ಕಳವು: ಮಹದೇವಪುರ ಕ್ಷೇತ್ರದ ದಾಖಲೆ ಬಿಡುಗಡೆ ಮಾಡಿದ ರಾಹುಲ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.