ಕಳೆದ ಲೋಕಸಭಾ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿದೆ ಎಂದು ಆರೋಪಿಸಿ, ಕಾಂಗ್ರೆಸ್ ನಾಯಕರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ಪ್ರತಿಭಟನಾ ಸಮಾವೇಶ ನಡೆಸಿದರು. ರಾಷ್ಟ್ರದಾದ್ಯಂತ ಈ ಪ್ರತಿಭಟನೆ ನಡೆಸಲು ಯೋಜಿಸಿರುವ ಕಾಂಗ್ರೆಸ್ ನಾಯಕರು, ಕರ್ನಾಟಕದ ಮೂಲಕವೇ ಇದಕ್ಕೆ ಚಾಲನೆ ನೀಡಿದರು. ಮತಗಳ್ಳತನದ ಮೂಲಕ ಅಧಿಕಾರದ ಗದ್ದುಗೆ ಏರಿರುವ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಗುಡುಗಿದರು.
.ಲಕ್ಷ ಮತ ಕಳವು: ಮಹದೇವಪುರ ಕ್ಷೇತ್ರದ ದಾಖಲೆ ಬಿಡುಗಡೆ ಮಾಡಿದ ರಾಹುಲ್.ಬೆಂಗಳೂರು | ಆರು ಮತಗಳಲ್ಲಿ ಒಂದು ಮತ ಕಳ್ಳತನ: ಸಮಾವೇಶದಲ್ಲಿ ಗುಡುಗಿದ ರಾಹುಲ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.