ತ್ರಿಶೂರ್ (ಕೇರಳ): 2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆದ್ದ ತ್ರಿಶೂರ್ ಕ್ಷೇತ್ರದಲ್ಲಿ ಭಾರಿ ಪ್ರಮಾಣದ ಮತ ಕಳ್ಳತನ ನಡೆದಿದೆ ಎಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಶುಕ್ರವಾರ ಆರೋಪಿಸಿದ್ದಾರೆ.
.ಚುನಾವಣಾ ಆಯೋಗಕ್ಕೆ ಪ್ರಮಾಣಪತ್ರ ಸಲ್ಲಿಸದೇ ರಾಹುಲ್ ಪಲಾಯನ: ಬೊಮ್ಮಾಯಿ.
‘ತ್ರಿಶೂರ್ ಹಾಗೂ ಇತರ ಸಂಸದೀಯ ಕ್ಷೇತ್ರಗಳಲ್ಲಿ ನಡೆದಿರುವ ಮತಗಳ್ಳತನನದ ಬಗ್ಗೆ ತನಿಖೆ ನಡೆಸಬೇಕು. ಅಕ್ರಮ ವಿಧಾನಗಳ ಮೂಲಕ ಮತಗಳನ್ನು ಸೇರಿಸಿದ್ದಾಗಿ ಸಂಘ ಪರಿವಾರದ ವಿರುದ್ಧ ತ್ರಿಶೂರ್ನಲ್ಲಿ ಹಲವಾರು ದೂರುಗಳು ಬಂದಿವೆ. ಈ ಬಗ್ಗೆ ಯುಡಿಎಫ್ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸುತ್ತದೆ’ ಎಂದು ಕಾಂಗ್ರೆಸ್ ನಾಯಕ ಪಝಯನ್ನೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

2024ರಲ್ಲಿ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುತ್ತು. ನಟ-ರಾಜಕಾರಣಿ ಸುರೇಶ್ ಗೋಪಿಯವರು ಸಿಪಿಐ(ಎಂ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಭ್ಯರ್ಥಿಗಳನ್ನು ಸೋಲಿಸಿ ಐತಿಹಾಸಿಕ ಗೆಲುವು ಸಾಧಿಸಿದ್ದರು.
.ಲಕ್ಷ ಮತ ಕಳವು: ಮಹದೇವಪುರ ಕ್ಷೇತ್ರದ ದಾಖಲೆ ಬಿಡುಗಡೆ ಮಾಡಿದ ರಾಹುಲ್.
ಸಾಂಪ್ರದಾಯಿಕವಾಗಿ ಬಿಜೆಪಿ ಸೀಮಿತ ಪ್ರಭಾವ ಹೊಂದಿರುವ ಕೇರಳದಲ್ಲಿ ಈ ಫಲಿತಾಂಶ ಅನೇಕರನ್ನು ಆಘಾತಗೊಳಿಸಿತ್ತು.

ಕರ್ನಾಟಕ, ಮಹಾರಾಷ್ಟ್ರ ಮತ್ತು ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮ ಮತ್ತು ಮತದಾರರ ಪಟ್ಟಿಗಳಲ್ಲಿ ತಿರುಚುವಿಕೆ ನಡೆದಿದೆ ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ ಮರುದಿನವೇ ಸತೀಶನ್ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.

ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭೆಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1,00,250 ಮತಗಳ್ಳತನ ನಡೆದಿದೆ ಎಂದು ಗಾಂಧಿ ಆರೋಪಿಸಿದ್ದಾರೆ.
.ಲೋಕಸಭಾ ಚುನಾವಣೆಯಲ್ಲಿ ‘ಕೈ’ ಹಿನ್ನಡೆಯ ಸತ್ಯ ಬಹಿರಂಗ: ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.