ಪಟ್ನಾ: ಮತದಾರರ ಪಟ್ಟಿ ವಿಶೇಷ ಪರಿಶೀಲನೆ ಹಾಗೂ ನೂತನ ಕಾರ್ಮಿಕ ನೀತಿಯನ್ನು ವಿರೋಧಿಸಿ ಬಿಹಾರದಲ್ಲಿ ಬುಧವಾರ (ಜುಲೈ9) ನಡೆಯಲಿರುವ ಪ್ರತಿಭಟನೆ, ರಸ್ತೆ ತಡೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ.

ವಿಧಾನಸಭೆ ಪ್ರತಿಪಕ್ಷದ ನಾಯಕ ತೇಜಸ್ವಿ ಯಾದವ್ ಉಪಸ್ಥಿತಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ‘ಇಂಡಿಯಾ’ ಒಕ್ಕೂಟದ ನಾಯಕರು ಈ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ರಾಜೇಶ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಬುಧವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಯಲಿದೆ. ರಾಜಧಾನಿ ಪಟ್ನಾದಲ್ಲಿ ಚುನಾವಣಾ ಆಯೋಗದ ಕಚೇರಿವರೆಗೆ ಪ್ರತಿಭಟನಾ ಜಾಥಾ ನಡೆಯಲಿದ್ದು, ಈ ವೇಳೆ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ. ನೂತನ ಕಾರ್ಮಿಕ ನೀತಿ ವಿರೋಧಿಸಿ ನಡೆಸಲಿರುವ ರಸ್ತೆ ತಡೆಗೆ ನಾವು ಬೆಂಬಲ ಘೋಷಿಸಿದ್ದೇವೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.