ನವದೆಹಲಿ: ಲೋಕಸಭೆಯಲ್ಲಿನ ಬಿಕ್ಕಟ್ಟು ನಿವಾರಣೆ ಸಂಬಂಧ ಲೋಕಸಭಾಧ್ಯಕ್ಷ ಓಂ ಬಿರ್ಲಾ ಹಾಗೂ ವಿಪಕ್ಷಗಳ ನಡುವೆ ಸೋಮವಾರ ನಡೆದ ಮಾತುಕತೆ ವಿಫಲವಾಯಿತು.

ಬಿಹಾರ ಹಾಗೂ ಇತರ ರಾಜ್ಯಗಳಲ್ಲಿನ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಬಗ್ಗೆ ಚರ್ಚೆಗೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿ ’ಇಂಡಿಯಾ‘ ಮೈತ್ರಿಕೂಟದ ಸಂಸದರು ಪ್ರಶ್ನೋತ್ತರ ಅವಧಿಯಲ್ಲಿ ಸಭಾಧ್ಯಕ್ಷರ ಪೀಠದ ಎದುರು ಧರಣಿ ನಡೆಸಿದರು. ಹೀಗಾಗಿ, ಕಲಾಪ ಮುಂದೂಡಲಾಯಿತು. ಪ್ರತಿಭಟನೆಯಿಂದಾಗಿ ಕ್ರೀಡಾ ಆಡಳಿತದ ಕುರಿತು ಪಟ್ಟಿ ಮಾಡಲಾದ ಎರಡು ಮಸೂದೆಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗಲಿಲ್ಲ. ಆ ಬಳಿಕ ಲೋಕಸಭಾಧ್ಯಕ್ಷರ ಕಚೇರಿಯಲ್ಲಿ ಸಭೆ ನಡೆಯಿತು.

ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಚರ್ಚೆಗೆ ಒತ್ತಾಯಿಸಿ ವಿಪಕ್ಷಗಳ ಸದಸ್ಯರು ಜುಲೈ 21ರಿಂದ ಸದನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಚರ್ಚೆಗೆ ಒತ್ತಾಯಿಸಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿ ವಿರೋಧ ಪಕ್ಷಗಳ ನಾಯಕರು ಓಂ ಬಿರ್ಲಾ ಅವರಿಗೆ ಶುಕ್ರವಾರ ಪತ್ರ ಬರೆದಿದ್ದರು.

ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಚರ್ಚೆ ನಡೆಸಬೇಕು ಎಂದು ಸಿಪಿಐ(ಎಂ) ಸಂಸದ ಬಸುದೇವ್ ಆಚಾರ್ಯ ಅವರು 1980 ರ ದಶಕದಲ್ಲಿ ಸದನದಲ್ಲಿ ಒತ್ತಾಯಿಸಿದ್ದರು. ಅದಕ್ಕೆ ಆಗಿನ ಸ್ಪೀಕರ್ ಬಲರಾಮ್ ಜಾಖರ್ ಒಪ್ಪಿಗೆ ಕೊಟ್ಟಿರಲಿಲ್ಲ. ಈ ಪ್ರಕರಣವನ್ನು ಉದಾಹರಣೆಯಾಗಿ ನೀಡಿದ ಓಂ ಬಿರ್ಲಾ ಅವರು ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಚರ್ಚೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು ಎಂದು ಮೂಲಗಳು ಹೇಳಿವೆ.

ಈ ಚರ್ಚೆಯು ಎಸ್ಐಆರ್ಗೆ ನಿರ್ದಿಷ್ಟವಾಗಿರಬೇಕೆಂದು ಒತ್ತಾಯಿಸುತ್ತಿಲ್ಲ. ಆದರೆ, ಅದು ಒಟ್ಟಾರೆ ಚುನಾವಣಾ ಸುಧಾರಣೆಗಳು ಮತ್ತು ಪ್ರಕ್ರಿಯೆ ಅಥವಾ ಮತದಾರರ ಪಟ್ಟಿಯ ಮೇಲೆ ಆಗಿರಬಹುದು. ಅಲ್ಲಿ ನಾವು ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ನಿರ್ದಿಷ್ಟವಾಗಿ ಚರ್ಚಿಸುವುದಿಲ್ಲ ಎಂದು ವಿಪಕ್ಷಗಳ ನಾಯಕರು ಸ್ಪೀಕರ್ಗೆ ತಿಳಿಸಿದರು ಎಂದು ಮೂಲಗಳು ತಿಳಿಸಿವೆ.

ಮುಂಗಾರು ಅಧಿವೇಶನದ ಮೊದಲ ಹತ್ತು ದಿನಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತಲಾ 22 ಗಂಟೆಗಳ ಕಾಲ ಕಲಾಪ ನಡೆದಿದೆ. ಇದರಲ್ಲಿ ಹೆಚ್ಚಿನ ಕೆಲಸದ ಸಮಯವನ್ನು ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ಕುರಿತ ಚರ್ಚೆಗೆ ಮೀಸಲಿಡಲಾಗಿತ್ತು. ಆದಾಗ್ಯೂ, ಎಸ್ಐಆರ್ ಕುರಿತು ಚರ್ಚೆಯ ಬೇಡಿಕೆಗೆ ಸರ್ಕಾರ ಒಪ್ಪಿಲ್ಲ. ವಿಪಕ್ಷಗಳು ತಮ್ಮ ಪಟ್ಟು ಸಡಿಲಿಸಿಲ್ಲ.

ʼವಿಷಯಗಳ ಬಗ್ಗೆ ಪ್ರಸ್ತಾಪಿಸಲು ಸಂಸದರನ್ನು ಜನರು ಆಯ್ಕೆ ಮಾಡುತ್ತಾರೆ. ಕಲಾಪಕ್ಕೆ ಈ ರೀತಿಯ ಅಡ್ಡಿಪಡಿಸುವಿಕೆಯು ಪ್ರಜಾಸತ್ತಾತ್ಮಕ ಮಾರ್ಗವಲ್ಲʼ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.