ಗುವಾಹಟಿ: ಮೃತಪಟ್ಟವರ ಮತ್ತು ಬೇರೆಡೆ ವಾಸಿಸುತ್ತಿರುವ ಹೆಸರುಗಳು ನದಿತೀರ ಮತ್ತು ಇತರ ಪ್ರದೇಶಗಳ ಮತದಾರರ ಪಟ್ಟಿಯಲ್ಲಿವೆ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಯ ಮೂಲಕ ಇಂತಹ ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರು ತಿಳಿಸಿದ್ದಾರೆ.

‘ಎಸ್ಐಆರ್ ವೇಳೆ ಮತದಾರರ ಪಟ್ಟಿಯಲ್ಲಿರುವ ಹೆಸರುಗಳನ್ನು ಆಧಾರ್ ಸಂಖ್ಯೆ ಜೊತೆ ತಾಳೆಹಾಕಲಾಗುತ್ತದೆ. ಇದರಿಂದಾಗಿ ಸಮಸ್ಯೆಗಳು ದೂರವಾಗುತ್ತವೆ’ ಎಂದು ಹೇಳಿದರು.

ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಿಸ್ವ ಟೀಕಿಸಿದರು.

‘ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಂತೆ ಮತ್ತು ಮತದಾರರ ಹೆಸರನ್ನು ಆಧಾರ್ ಸಂಖ್ಯೆ ಜೊತೆ ತಾಳೆ ಹಾಕುವಂತೆ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗಕ್ಕೆ ಸಲಹೆ ನೀಡಲಿ. ಆದರೆ ಅವರಿಗೆ ಇದರ ಬಗ್ಗೆ ಆಸಕ್ತಿ ಇಲ್ಲ. ಮತದಾರರ ಪಟ್ಟಿಯಲ್ಲಿ ವ್ಯತ್ಯಾಸಗಳಿದ್ದರೆ ಕಾಂಗ್ರೆಸ್ ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಹೇಗೆ ಜಯಗಳಿಸಿತು? ಮೊದಲು ಎಲೆಕ್ಟ್ರಾನಿಕ್ ಮತಯಂತ್ರ(ಇವಿಎಂ)ಗಳ ಬಗ್ಗೆ ಆರೋಪ ಮಾಡುತ್ತಿದ್ದರು. ಈಗ ಮತದಾರರ ಪಟ್ಟಿಯ ಬಗ್ಗೆ ದೂರುತ್ತಿದ್ದಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.