57 ವರ್ಷದ ಬ್ರಿಟಿಷ್ ದೇಶದ ಮಿಷೆಲ್ ಅವರನ್ನು ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಮುಂದೆ ಹಾಜರುಪಡಿಸಲಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲವಾರು ದಾಖಲೆಗಳ ಬಗ್ಗೆ ಮಿಷೆಲ್ ಅವರಿಂದ ಮಾಹಿತಿ ಪಡೆಯಬೇಕಿದ್ದು, ಕಸ್ಟಡಿ ಅವಧಿಯನ್ನು ವಿಸ್ತರಿಸುವಂತೆ ಸಿಬಿಐ ಅಧಿಕಾರಿಗಳು ಮನವಿ ಮಾಡಿದರು. ಇದಕ್ಕೆ ನ್ಯಾಯಾಧೀಶರು ಸಮ್ಮತಿಸಿದ್ದಾರೆ.