ನವದೆಹಲಿ: ಬ್ಯಾಂಕ್ ವಂಚನೆ, ಹಣಅಕ್ರಮ ವರ್ಗಾವಣೆಯ ಪ್ರಕರಣ ಹಾಗೂ ₹ 3,600 ಕೋಟಿ ವಿವಿಐಪಿ ಹೆಲಿಕಾಪ್ಟರ್ ಡೀಲ್ ಪ್ರಕರಣದ ಆರೋಪಿಯೂ ಆಗಿರುವ ರಾಜೀವ್ ಸಕ್ಸೇನಾ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಬಂಧಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಸಕ್ಸೇನಾ ಅವರನ್ನು ವಶಕ್ಕೆ ಪಡೆಯುವ ಮುನ್ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದೂ ಅವರು ಮಾಹಿತಿ ನೀಡಿದ್ದಾರೆ.

ದುಬೈನಲ್ಲಿ ನೆಲೆಸಿದ್ದ ರಾಜೀವ್ ಸಕ್ಸೇನಾ ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಪ್ರಕರಣದಲ್ಲಿ ಮಧ್ಯವರ್ತಿಯಾಗಿ ಅಕ್ರಮವಾಗಿ ಹಣ ಸಂಪಾದಿಸಿದ್ದರು. 2019ರ ಜ. 31ರಂದು ಸಕ್ಸೇನಾ ಅವರನ್ನು ಯುಎಇಯು ಭಾರತಕ್ಕೆ ಗಡಿಪಾರು ಮಾಡಿತ್ತು. ನಂತರ ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು.

‘ದುಬೈನಲ್ಲಿ ವಿವಿಧ ಕಂಪನಿಗಳ ಹೆಸರಿನಲ್ಲಿ ಉದ್ಯಮ ನಡೆಸುತ್ತಿದ್ದ ಸಕ್ಸೇನಾ, ಮ್ಯಾಟ್ರಿಕ್ ಗ್ರೂಪ್ ಕಂಪನೀಸ್ ಹೆಸರಿನಿಂದ ಪ್ರಸಿದ್ಧರಾಗಿದ್ದರು. ಹೆಲಿಕಾಪ್ಟರ್ ಹಗರಣದಲ್ಲಿ ಭಾಗಿಯಾಗಿದ್ದ ಅವರು ಮೊಸರ್ ಬೇರ್ ಬ್ಯಾಂಕ್‌ಗೆ ವಂಚಿಸಿದ್ದ ಪ್ರಕರಣದಲ್ಲೂ ಆರೋಪಿಯಾಗಿದ್ದಾರೆ. ಇತರ ಹಲವು ವಂಚನೆ ಪ್ರಕರಣಗಳಲ್ಲೂ ರಾಜೀವ್ ಸಕ್ಸೇನಾ ಅವರ ಹೆಸರು ಕೇಳಿಬಂದಿದ್ದು ತನಿಖೆ ಪ್ರಗತಿಯಲ್ಲಿದೆ’ ಎಂದು ಇ.ಡಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.