ತಿರುವನಂತಪುರಂ/ಮಧುರೈ: ಕೇಂದ್ರದ ಎನ್ಡಿಎ ಸರ್ಕಾರ ಪ್ರಸ್ತಾಪಿಸಿರುವ ವಕ್ಫ್ ತಿದ್ದುಪಡಿ ಮಸೂದೆಗೆ ಸಿಪಿಐ(ಎಂ) ಬುಧವಾರ ತನ್ನ ವಿರೋಧ ವ್ಯಕ್ತಪಡಿಸಿದೆ.

ಸಂಸತ್ತಿನಲ್ಲಿ ಪಕ್ಷದ ಸಂಸದರು ಅದರ ವಿರುದ್ಧ ಮತ ಚಲಾಯಿಸುತ್ತಾರೆ ಎಂದು ಸಿಪಿಐ(ಎಂ) ಮುಖಂಡರು ತಿಳಿಸಿದ್ದಾರೆ.

ತಮಿಳುನಾಡಿನ ಮಧುರೈನಲ್ಲಿ ನಡೆಯುತ್ತಿರುವ ಪಕ್ಷದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಅವರು, ಈಗಾಗಲೇ ನಾವು ವಕ್ಫ್ ಮಸೂದೆ ವಿರುದ್ಧವಾಗಿ ನಿಲುವು ತೆಗೆದುಕೊಂಡಿದ್ದೇವೆ. ಆ ಪ್ರಕಾರ ಸಂಸತ್ತಿನಲ್ಲಿ ಮತ ಚಲಾಯಿಸುತ್ತೇವೆ ಎಂದು ಹೇಳಿದರು.

ಈ ವಿಷಯದ ಬಗ್ಗೆ ಕೇರಳ ಕ್ಯಾಥೋಲಿಕ್ ಬಿಷಪ್ಸ್ ಕೌನ್ಸಿಲ್ (ಕೆಸಿಬಿಸಿ) ತೆಗೆದುಕೊಂಡಿರುವ ನಿಲುವು ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಗೋವಿಂದನ್ ಹೇಳಿದರು.

ಕೆಸಿಬಿಸಿ ವಕ್ಫ್ ತಿದ್ದುಪಡಿ ಮಸೂದೆ ಪರವಾಗಿ ನಿಂತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.