ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಬುಧವಾರ ಬಲವಾಗಿ ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ, ‘ವಕ್ಫ್ ಇಸ್ಲಾಮಿಕ್ ಪರಿಕಲ್ಪನೆಯಾಗಿದ್ದರೂ ಅದು ಇಸ್ಲಾಂನ ಅತ್ಯಗತ್ಯ ಭಾಗವಲ್ಲ’ ಎಂದು ಹೇಳಿದೆ.

ವಕ್ಫ್ (ತಿದ್ದುಪಡಿ) ಕಾಯ್ದೆ 2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸೀಹ್ ಅವರಿರುವ ಪೀಠದ ಎದುರು ‘ಸರ್ಕಾರಿ ಭೂಮಿಯನ್ನು ವಕ್ಫ್ ಎಂದು ಪರಿಗಣಿಸಲು ಸಾಧ್ಯವಿಲ್ಲ’ ಎಂದು ಕೇಂದ್ರ ಸರ್ಕಾರ ವಾದಿಸಿದೆ.

ಕೇಂದ್ರದ ಪರವಾಗಿ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ‘ದಾನವನ್ನು ಪ್ರತಿ ಧರ್ಮದಲ್ಲೂ ಗುರುತಿಸಲಾಗಿದೆ ಮತ್ತು ಅದನ್ನು ಯಾವುದೇ ಧರ್ಮದ ಅತ್ಯಗತ್ಯ ಸಿದ್ಧಾಂತವೆಂದು ಪರಿಗಣಿಸಲಾಗದು. ಇಸ್ಲಾಂನಲ್ಲಿ ವಕ್ಫ್ ಕೇವಲ ದಾನವಲ್ಲದೆ ಬೇರೇನೂ ಅಲ್ಲ. ವಕ್ಫ್ ಆಸ್ತಿ ಮೇಲೆ ಯಾರೂ ಹಕ್ಕು ಸಾಧಿಸಲು ಸಾಧ್ಯವಿಲ್ಲ. ವಕ್ಫ್ ಆಸ್ತಿಗಳನ್ನು ಮರಳಿ ಪಡೆಯಲು ಸರ್ಕಾರಕ್ಕೆ ಕಾನೂನುಬದ್ಧ ಅಧಿಕಾರವಿದೆ’ ಎಂದು ಪ್ರತಿಪಾದಿಸಿದರು.

‘ನೋಂದಾಯಿಸದ ಬಳಕೆದಾರರಿಂದ ವಕ್ಫ್ ಆಸ್ತಿಗಳನ್ನು ರದ್ದುಗೊಳಿಸುವ ನಿಬಂದನೆಗೆ ನೀಡುವ ಯಾವುದೇ ತಡೆಯಾಜ್ಞೆಯು ಸರ್ಕಾರಿ ಭೂಮಿಯನ್ನು ಕಬಳಿಸುವ ಕುಕೃತ್ಯ ಹತ್ತಿಕ್ಕಲು ಜಾರಿಗೆ ತರಲಾದ ಕಾನೂನಿನ ಉದ್ದೇಶಕ್ಕೆ ಸೋಲುಂಟಾಗುತ್ತದೆ’ ಎಂದು ಮೆಹ್ತಾ ಹೇಳಿದರು.

ಅರ್ಜಿಗಳ ವಿಚಾರಣೆ ಗುರುವಾರವೂ ಮುಂದುವರಿಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.