ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆಯನ್ನು ನಿಯೋಜಿತ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಹೊಸ ಪೀಠವು ಇದೇ 15ರಂದು ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.

ಆದಾಗ್ಯೂ, ದೇಶದಲ್ಲಿ 39,21,236 ಎಕರೆ ವಕ್ಫ್ ಭೂಮಿ ಇದೆ ಎಂದು ಕೇಂದ್ರ ಸರ್ಕಾರ ನೀಡಿರುವ ಅಂಕಿ ಅಂಶಗಳನ್ನು ಪರಿಗಣಿಸಲಾಗುವುದು ಎಂದು ಪೀಠವು ತಿಳಿಸಿದೆ. ಈ ಅಂಕಿಅಂಶಕ್ಕೆ ಪ್ರತಿವಾದಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ.ವಿಶ್ವನಾಥನ್ ಅವರನ್ನು ಒಳಗೊಂಡ ಪೀಠವು ಸೋಮವಾರ ಪ್ರಕರಣದ ವಿಚಾರಣೆ ನಡೆಸಬೇಕಿತ್ತು.

ಸಂಜೀವ್ ಖನ್ನಾ ಅವರು ಇದೇ 13ರಂದು ನಿವೃತ್ತರಾಗಲಿದ್ದಾರೆ. ಗವಾಯಿ ಅವರು 14ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ವಿಚಾರಣೆ ಆರಂಭವಾದ ಕೂಡಲೇ ಸಿಜೆಐ, ‘ನಾವು ಪ್ರಮಾಣಪತ್ರ ಹಾಗೂ ಪ್ರತಿ ಪ್ರಮಾಣಪತ್ರಗಳನ್ನು ಪರಿಶೀಲಿಸಿದ್ದೇವೆ. ಆದರೆ, ಅವುಗಳಿಗೆ ಸ್ಪಷ್ಟೀಕರಣದ ಅಗತ್ಯ ಇದೆ. ಈ ಮಧ್ಯಂತರ ಹಂತದಲ್ಲಿ ಯಾವುದೇ ತೀರ್ಪು ಅಥವಾ ಆದೇಶ ನೀಡಲು ನಾನು ಬಯಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ನಾವು ಕೇಂದ್ರದ ಪ್ರತಿ ಪ್ರಮಾಣಪತ್ರವನ್ನು ಆಳವಾಗಿ ಪರಿಶೀಲಿಸಿಲ್ಲ. ಹೌದು, ನೀವು (ವಕ್ಫ್ ಆಸ್ತಿಗಳ) ನೋಂದಣಿಗೆ ಸಂಬಂಧಿಸಿದಂತೆ ಕೆಲವೊಂದು ವಿಷಯಗಳನ್ನು ಎತ್ತಿದ್ದೀರಿ ಹಾಗೂ ಕೆಲವು ವಿವಾದಾತ್ಮಕ ಅಂಕಿಅಂಶಗಳನ್ನು ನೀಡಿದ್ದೀರಿ. ಅವುಗಳನ್ನು ಸ್ವಲ್ಪ ಪರಿಗಣಿಸುವ ಅಗತ್ಯ ಇದೆ’ ಎಂದು ಸಿಜೆಐ ಹೇಳಿದರು.

‘ಪ್ರತಿಯೊಂದು ವಾದಕ್ಕೂ ಉತ್ತರವಿರುವುದರಿಂದ ನಾವು ನಿಮ್ಮ ಪೀಠದಲ್ಲೇ (ಸಿಜೆಐ) ಮುಂದುವರಿಸಲು ಇಷ್ಟಪಡುತ್ತಿದ್ದೆವು. ಆದರೆ, ಸಮಯವಿಲ್ಲದ ಕಾರಣ ನಾವು ನಿಮ್ಮನ್ನು ಮುಜುಗರಕ್ಕೀಡು ಮಾಡಲು ಸಾಧ್ಯವಿಲ್ಲ’ ಎಂದು ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು.

‘ನಿಮ್ಮ ನಿವೃತ್ತಿಯ ಬಗ್ಗೆ ನೆನಪಿಸುವುದು ನೋವಿನ ಸಂಗತಿ’ ಎಂದು ಅವರು ಹೇಳಿದರು.

‘ಇಲ್ಲ ಇಲ್ಲ... ನಾನು ನಿವೃತ್ತಿಯನ್ನು ಎದುರು ನೋಡುತ್ತಿದ್ದೇನೆ’ ಎಂದು ಸಿಜೆಐ ಪ್ರತಿಕ್ರಿಯಿಸಿದರು.

‘ಕೇಂದ್ರದ ಪ್ರಮಾಣಪತ್ರ ಸಮಗ್ರವಾಗಿದೆ ಮತ್ತು ಹಿಂದಿನ ವಿಚಾರಣೆ ಸಂದರ್ಭದಲ್ಲಿ ವ್ಯಕ್ತಪಡಿಸಿದ ಕಳವಳಗಳಿಗೆ ಉತ್ತರ ನೀಡುವ ಪ್ರಯತ್ನ ಆಗಿದೆ’ ಎಂದು ಸಿಜೆಐ ಹೇಳಿದರು.

ಏಪ್ರಿಲ್ 17ರ ವಿಚಾರಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರವು, ‘ಕೇಂದ್ರ ವಕ್ಫ್ ಪರಿಷತ್ತು ಮತ್ತು ರಾಜ್ಯ ವಕ್ಫ್ ಮಂಡಳಿಗಳಿಗೆ ಮುಂದಿನ ವಿಚಾರಣೆಯವರೆಗೆ ಯಾವುದೇ ನೇಮಕಾತಿ ನಡೆಸುವುದಿಲ್ಲ ಮತ್ತು ನ್ಯಾಯಾಲಯಗಳು ವಕ್ಫ್ ಎಂದು ಘೋಷಿಸಿರುವ ಆಸ್ತಿಗಳನ್ನು ಡಿ–ನೋಟಿಫೈ ಮಾಡುವುದಿಲ್ಲ’ ಭರವಸೆ ನೀಡಿತ್ತು.

ಏಪ್ರಿಲ್ 25ರಂದು ಸುಪ್ರೀಂ ಕೋರ್ಟ್ಗೆ 1,332 ಪುಟಗಳ ಪ್ರಾಥಮಿಕ ಪ್ರಮಾಣಪತ್ರ ಸಲ್ಲಿಸಿದ್ದ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ‘ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳನ್ನು ವಜಾಗೊಳಿಸಬೇಕು’ ಎಂದು ಕೋರಿತ್ತು. ‘ಕಾಯ್ದೆಯಲ್ಲಿನ ಕೆಲ ಅವಕಾಶಗಳ ಕುರಿತು ದುರುದ್ದೇಶದಿಂದ ಕೂಡಿದ ಸುಳ್ಳು ಸಂಕಥನಗಳನ್ನು ಈ ಮೇಲ್ಮನವಿಗಳು ಒಳಗೊಂಡಿವೆ. ಹೀಗಾಗಿ ಕಾಯ್ದೆಯಲ್ಲಿರುವ ಅವಕಾಶಗಳಿಗೆ ತಡೆ ನೀಡಬಾರದು’ ಎಂದೂ ಕೇಂದ್ರ ಸರ್ಕಾರ ಪ್ರತಿಪಾದಿಸಿತ್ತು.

‘ಕಾಯ್ದೆಗೆ ಸಂಬಂಧಿಸಿ ಸಂಪೂರ್ಣ ಅಥವಾ ಭಾಗಶಃ ತಡೆ ನೀಡುವುದರಿಂದ ಆಗುವ ಪರಿಣಾಮಗಳ ಕುರಿತು ಅರಿವು ಇಲ್ಲದೆಯೇ ಇಂತಹ ಯಾವುದೇ ಆದೇಶ ನೀಡುವುದನ್ನು ಒಪ್ಪತಕ್ಕದ್ದಲ್ಲ. ಇಂತಹ ಆದೇಶವು ಮುಸ್ಲಿಂ ಸಮುದಾಯದ ಸದಸ್ಯರ ಮೇಲೂ ಅಡ್ಡ ಪರಿಣಾಮ ಬೀರುತ್ತದೆ’ ಎಂದು ಅಭಿಪ್ರಾಯಪಟ್ಟಿತ್ತು.

‘ವಕ್ಫ್ ತಿದ್ದುಪಡಿ ಕಾಯ್ದೆಯು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂಬ ವಾದದಲ್ಲಿ ಸತ್ಯಾಂಶ ಇಲ್ಲ. ಕಾಯ್ದೆಯು ಮುಸ್ಲಿಂ ಸಮುದಾಯದ ಮುಖ್ಯ ಧಾರ್ಮಿಕ ಪದ್ಧತಿಗಳನ್ನು ಗೌರವಿಸುತ್ತದೆ. ನಂಬಿಕೆ ಮತ್ತು ಪ್ರಾರ್ಥನೆಯಂತಹ ವಿಚಾರಗಳ ಗೊಡವೆಗೆ ಹೋಗಿಲ್ಲ’ ಎಂದು ಸ್ಪಷ್ಟಪಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.