ನವದೆಹಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಗುರುವಾರ ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2025 ಅನ್ನು ಮಂಡಿಸಿದ್ದಾರೆ.

ಪ್ರಸ್ತಾವಿತ ಮಸೂದೆಯು ಮುಸ್ಲಿಮರ ವಿರುದ್ಧವಾಗಿಲ್ಲ ಅಥವಾ ಅವರ ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶವನ್ನು ಹೊಂದಿಲ್ಲ, ಆದರೆ, ವಕ್ಫ್ ಆಸ್ತಿಗಳ ಕಾರ್ಯನಿರ್ವಹಣೆಯನ್ನು ಸುಧಾರಿಸಲು, ಸಂಕೀರ್ಣತೆಗಳನ್ನು ಪರಿಹರಿಸಲು, ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ತಂತ್ರಜ್ಞಾನ ಆಧಾರಿತ ನಿರ್ವಹಣೆಯನ್ನು ಪರಿಚಯಿಸಲು ಪ್ರಯತ್ನಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ.

ಸುಮಾರು 12 ಗಂಟೆಗಳ ಚರ್ಚೆಯ ನಂತರ ಗುರುವಾರ ಬೆಳಗಿನ ಜಾವ ಲೋಕಸಭೆಯು 288-232 ಮತಗಳೊಂದಿಗೆ ಮಸೂದೆಯನ್ನು ಅಂಗೀಕರಿಸಲಾಗಿತ್ತು.

ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಪರಿಶೀಲಿಸಿ ಪುನರ್ರಚಿಸಲಾದ ಮಸೂದೆಯನ್ನು ಮೇಲ್ಮನೆಯಲ್ಲಿ ಮಂಡಿಸಿದ ರಿಜಿಜು, ಪ್ರಸ್ತಾವಿತ ಶಾಸನವು ಧರ್ಮದೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ ಆದರೆ, ವಕ್ಫ್ ಮಂಡಳಿ ಆಸ್ತಿಗಳೊಂದಿಗೆ ಮಾತ್ರ ವ್ಯವಹರಿಸುತ್ತದೆ ಎಂದು ಹೇಳಿದರು.

ಮುಸ್ಲಿಂ ಸಮುದಾಯದ ಎಲ್ಲ ಪಂಗಡಗಳನ್ನು ವಕ್ಫ್ ಮಂಡಳಿಯಲ್ಲಿ ಸೇರಿಸುವ ಗುರಿಯನ್ನು ಮಸೂದೆ ಹೊಂದಿದೆ ಎಂದು ರಿಜಿಜು ಹೇಳಿದರು.

2004ರಲ್ಲಿ 4.9 ಲಕ್ಷ ವಕ್ಫ್ ಆಸ್ತಿಗಳಿದ್ದವು. ಈಗ ಅವು 8.72 ಲಕ್ಷಕ್ಕೆ ಏರಿವೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.

ಮಸೂದೆಯನ್ನು ಅಂಗೀಕರಿಸಲು ವಿರೋಧ ಪಕ್ಷದ ಬೆಂಬಲವನ್ನು ಕೋರಿದ ರಿಜಿಜು, ಹಿಂದಿನ ಸರ್ಕಾರಗಳು ಪೂರೈಸದ ಕಾರ್ಯಗಳನ್ನು ಸಾಧಿಸುವ ಗುರಿಯನ್ನು ನಮ್ಮ ಸರ್ಕಾರ ಹೊಂದಿದೆ ಎಂದು ಹೇಳಿದರು.

ರಕ್ಷಣಾ ಮತ್ತು ರೈಲ್ವೆ ಸಚಿವಾಲಯಗಳ ಒಡೆತನದ ಆಸ್ತಿಗಳನ್ನು ಹೊರತುಪಡಿಸಿ, ವಕ್ಫ್ ದೇಶದಲ್ಲಿ ಅತಿ ಹೆಚ್ಚು ಆಸ್ತಿಯನ್ನು ಹೊಂದಿದೆ ಎಂದು ಅವರು ಹೇಳಿದರು.ವಕ್ಫ್ ಮಸೂದೆ
.ಲೋಕಸಭೆಯಲ್ಲಿ ವಕ್ಫ್ ಮಸೂದೆ ಅಂಗೀಕಾರ: ಅಖಿಲ ಭಾರತ ಮುಸ್ಲಿಂ ಜಮಾತ್ ಸ್ವಾಗತ.
ವಿರೋಧ ಪಕ್ಷಗಳ ಆರೋಪಗಳನ್ನು ತಳ್ಳಿಹಾಕಿದ ರಿಜಿಜು, ಮಸೂದೆಯು ಮುಸ್ಲಿಮರ ವಿರುದ್ಧವಲ್ಲ... ನಾವು ಯಾರ ಧಾರ್ಮಿಕ ಭಾವನೆಗಳನ್ನೂ ನೋಯಿಸಲು ಬಯಸುವುದಿಲ್ಲ. ವಕ್ಫ್ ಮಂಡಳಿಯನ್ನು ವಕ್ಫ್ ಆಸ್ತಿಗಳನ್ನು ನಿರ್ವಹಿಸಲು ಮಂಡಳಿ ಸ್ಥಾಪಿಸಿಲ್ಲ, ಮೇಲ್ವಿಚಾರಣೆ ಮಾಡಲು ಮಾತ್ರ ಸ್ಥಾಪಿಸಲಾಗಿದೆ ಎಂದು ಹೇಳಿದರು.

ಸರ್ಕಾರವು ಒಳ್ಳೆಯ ಉದ್ದೇಶದಿಂದ ಮಸೂದೆಯನ್ನು ಪರಿಚಯಿಸಿದೆ. ಆದ್ದರಿಂದ ಅದನ್ನು 'UMEED' ಎಂದು ಮರುನಾಮಕರಣ ಮಾಡಿದೆ. ಯಾರಿಗೂ ಹೆಸರಿನ ಬಗ್ಗೆ ಯಾವುದೇ ಸಮಸ್ಯೆ ಇರಬಾರದು ಎಂಬುದು ಇದರ ಉದ್ದೇಶ ಎಂದು ಹೇಳಿದ್ದಾರೆ.

ವಕ್ಫ್ ಮಸೂದೆಯನ್ನು ಏಕೀಕೃತ ವಕ್ಫ್ ನಿರ್ವಹಣಾ ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ (ಯುಎಂಇಇ) ಎಂದು ಮರುನಾಮಕರಣ ಮಾಡಲು ಸರ್ಕಾರ ಪ್ರಸ್ತಾಪಿಸಿದೆ.
. Waqf Bill | ಸಂವಿಧಾನದ ಮೇಲಿನ ನಿರ್ಲಜ್ಜ ದಾಳಿ: ಸೋನಿಯಾ ಗಾಂಧಿ.ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಕೋರ್ಟ್ಗೆ ಮೊರೆ: ಎಐಎಂಪಿಎಲ್ಬಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.