ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಕ್ಫ್ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಶೀಘ್ರ ಅಂಗೀಕಾರವಾಗಲಿದೆ: ಅಮಿತ್‌ ಶಾ

Published : 17 ಸೆಪ್ಟೆಂಬರ್ 2024, 10:48 IST
Last Updated : 17 ಸೆಪ್ಟೆಂಬರ್ 2024, 10:48 IST
ಫಾಲೋ ಮಾಡಿ
Comments

ನವದೆಹಲಿ: ವಕ್ಫ್‌ (ತಿದ್ದುಪಡಿ) ಮಸೂದೆಯು ವಕ್ಫ್‌ ಆಸ್ತಿಗಳ ನಿರ್ವಹಣೆ ಮತ್ತು ಸಂರಕ್ಷಣೆಗೆ ಬದ್ಧವಾಗಿದೆ. ಮುಂಬರುವ ದಿನಗಳಲ್ಲಿ ಸಂಸತ್ತಿನಲ್ಲಿ ಅಂಗೀಕಾರವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಅವಧಿಯಲ್ಲಿ 100 ದಿನಗಳನ್ನು ಪೂರೈಸಿದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಸೂದೆಯು ವಕ್ಫ್‌ ಆಸ್ತಿಗಳ ದುರ್ಬಳಕೆಯನ್ನು ತಡೆಗಟ್ಟುತ್ತದೆ’ ಎಂದು ಹೇಳಿದ್ದಾರೆ.

ಕಳೆದ ತಿಂಗಳು ಲೋಕಸಭೆಯಲ್ಲಿ ವಕ್ಫ್‌ (ತಿದ್ದುಪಡಿ) ಮಸೂದೆಯನ್ನು ಮಂಡಿಸಲಾಯಿತು. ಆದರೆ, ಇದಕ್ಕೆ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಮರು ಪರಿಶೀಲನೆಗಾಗಿ ಜಂಟಿ ಸಂಸದೀಯ ಸಮಿತಿಗೆ ಕೇಂದ್ರ ಶಿಫಾರಸು ಮಾಡಿತ್ತು.

ವಕ್ಫ್ ಮಂಡಳಿಗಳನ್ನು ನಿಯಂತ್ರಿಸುವ ಕಾನೂನಿನ ತಿದ್ದುಪಡಿಯನ್ನು ಈ ಮಸೂದೆ ಒಳಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT