ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ದೇಶದ ಸಂವಿಧಾನದ ಮೇಲಿನ ‘ನಿರ್ಲಜ್ಜ ದಾಳಿ’ ಎಂದು ಟೀಕಿಸಿರುವ ಕಾಂಗ್ರೆಸ್ನ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ‘ಇದು ಸಮಾಜವನ್ನು ಶಾಶ್ವತವಾಗಿ ಧ್ರುವೀಕರಣ ಸ್ಥಿತಿಯಲ್ಲಿಡಲು ಬಿಜೆಪಿ ಹೆಣೆದ ಉದ್ದೇಶಪೂರ್ವಕ ಕಾರ್ಯತಂತ್ರದ ಭಾಗವಾಗಿದೆ’ ಎಂದು ಗುರುವಾರ ಕಿಡಿಕಾರಿದ್ದಾರೆ.

ಸಂವಿಧಾನ ಸದನದ ಸೆಂಟ್ರಲ್ ಹಾಲ್ನಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಪಕ್ಷದ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಸೋನಿಯಾ, ‘ಒಂದು ದೇಶ, ಒಂದು ಚುನಾವಣೆ (ಒಎನ್ಒಇ) ಮಸೂದೆ ಕೂಡ ಸಂವಿಧಾನದ ಮೇಲಿನ ಮತ್ತೊಂದು ವಿಧ್ವಂಸಕ ದಾಳಿ. ಪಕ್ಷ ಇದನ್ನು ಬಲವಾಗಿ ವಿರೋಧಿಸುತ್ತದೆ’ ಎಂದು ಹೇಳಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಒಬಿಸಿಗಳಿಗೆ ಸೇರಿದ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿ ನೀಡಬೇಕೆಂಬ ಬೇಡಿಕೆಯೊಂದಿಗೆ ಸಂಸತ್ತು ಅಂಗೀಕರಿಸಿದ ಮಹಿಳಾ ಮೀಸಲಾತಿ ಮಸೂದೆಯ ಅನುಷ್ಠಾನವನ್ನು ಸರ್ಕಾರ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುತ್ತಿದೆ ಎಂದು ಅವರು ಆರೋಪಿಸಿದರು.

‘ಭಾರತವನ್ನು ಕಣ್ಗಾವಲಿನ ರಾಷ್ಟ್ರವನ್ನಾಗಿ ಮಾಡಲು ಹೊರಟಿರುವ ಉದ್ದೇಶವನ್ನು ಮತ್ತು ಮೋದಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ತೆರೆದಿಡುವುದು ಹಾಗೂ ನ್ಯಾಯಕ್ಕಾಗಿ ಸರಿಯಾದ ಹೋರಾಟ ನಡೆಸುವುದು ಅತ್ಯಗತ್ಯವಾಗಿದೆ’ ಎಂದು ಅವರು ಒತ್ತಿ ಹೇಳಿದರು.

‘ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರಿಗೆ ಸಂಸತ್ನಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ. ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ಗೆ ದನಿ ಎತ್ತಲು ಅವಕಾಶ ನೀಡದಿರಲು ಆಡಳಿತಾರೂಢ ಪಕ್ಷಗಳು ಆಗಾಗ್ಗೆ ಗೊಂದಲವನ್ನು ಸೃಷ್ಟಿಸುತ್ತಿವೆ’ ಎಂದು ಆರೋಪಿಸಿದರು.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು, ಚೀನಾ ಗಡಿ ವಿವಾದ, ರಕ್ಷಣಾ ಮತ್ತು ವಿದೇಶಾಂಗ ವ್ಯವಹಾರಗಳಂತಹ ಸಚಿವಾಲಯಗಳ ಕಾರ್ಯವೈಖರಿಯ ಕುರಿತು ಹಾಗೂ ಸಾರ್ವಜನಿಕ ಪ್ರಾಮುಖ್ಯತೆಯ ಹಲವು ವಿಷಯಗಳ ಬಗ್ಗೆ ಚರ್ಚೆ ಆಗಬೇಕೆಂದು ಪಕ್ಷವು ಒತ್ತಾಯಿಸಿದೆ. ಆದರೆ, ದುರದೃಷ್ಟವಶಾತ್ ಆಡಳಿತಾರೂಢ ಬಿಜೆಪಿ ಇದಕ್ಕೆ ನಿರಾಕರಿಸಿದೆ ಎಂದು ಹೇಳಿದರು.

‘ಯುಪಿಎ ಆಡಳಿತ ಅವಧಿಯಲ್ಲಿ ಆಗಿರುವ ಅನೇಕ ಉಪಕ್ರಮಗಳು ಮತ್ತು ಯೋಜನೆಗಳನ್ನು ಮೋದಿ ಅವರು ಮರು ನಾಮಕರಣಗೊಳಿಸಿ, ತಮ್ಮ ವೈಯಕ್ತಿಕ ಸಾಧನೆಗಳೆಂಬಂತೆ ಪ್ರಚಾರ ಮಾಡಿಕೊಳ್ಳುತ್ತಿರುವುದು ಎಲ್ಲರಿಗೂ ತಿಳಿದಿದೆ. ನಾವು ಇದನ್ನು ಸಾರ್ವಜನಿಕ ಸಂಪರ್ಕ ಚಟುವಟಿಕೆಗಳ ಮೂಲಕ ಬಹಿರಂಗಪಡಿಸಿ, ಜನರಿಗೆ ಸತ್ಯ ಮುಟ್ಟಿಸಬೇಕಿದೆ’ ಎಂದು ಅವರು ಹೇಳಿದರು.
.ಲೋಕಸಭೆಯಲ್ಲಿ ವಕ್ಫ್ ಮಸೂದೆ ಅಂಗೀಕಾರ: ಅಖಿಲ ಭಾರತ ಮುಸ್ಲಿಂ ಜಮಾತ್ ಸ್ವಾಗತ.Waqf Amendment Bill: ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಗೆ ಲೋಕಸಭೆ ಅಸ್ತು.ವಕ್ಫ್ ಆಸ್ತಿ | ಲೋಕಸಭೆಯಲ್ಲಿ ಕರ್ನಾಟಕದ ವಿಚಾರವಾಗಿ ಜಟಾಪಟಿ.ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಕೋರ್ಟ್ಗೆ ಮೊರೆ: ಎಐಎಂಪಿಎಲ್ಬಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.