ಬಿಹಾರ: ಬಿಹಾರದ ಹಾಜಿಪುರ ಮುನ್ಸಿಪಲ್ ಕಾರ್ಪೋರೇಷನ್‌ನ ಕೌನ್ಸಿಲರ್ ಅನ್ನು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಪಂಕಜ್ ರೈ ಹತ್ಯೆಯಾದ ಕೌನ್ಸಿಲರ್.
ಮಂಗಳವಾರ ರಾತ್ರಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅಂಗಡಿಯೊಂದರ ಬಳಿ ಕುಳಿತಿದ್ದ ಪಂಕಜ್ ಅವರಿಗೆ ಗುಂಡು ಹಾರಿಸಿದ್ದಾರೆ. ಅವರು ತಪ್ಪಿಸಿಕೊಂಡು ಮನೆಯೆಡೆಗೆ ಓಡಿದರೂ ಬಿಡದೆ ಅಟ್ಟಾಡಿಸಿಕೊಂಡಿ ಹೋಗಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಗುಂಡಿನ ಸದ್ದು ಕೇಳಿ ಮನೆಯಿಂದ ಹೊರಬಂದ ಪಂಕಜ್ ಕುಟುಂಬ, ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ಪಂಕಜ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.