ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BBC Documentary On Modi: ಸುಪ್ರೀಂ ಕೋರ್ಟ್‌ನ ಅತ್ಯಮೂಲ್ಯ ಸಮಯ ವ್ಯರ್ಥ: ರಿಜಿಜು

Last Updated 30 ಜನವರಿ 2023, 9:39 IST
ಅಕ್ಷರ ಗಾತ್ರ

ನವದೆಹಲಿ: 2002ರ ಗೋಧ್ರೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರಕ್ಕೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ.

ಇದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿದೆ.

ಪತ್ರಕರ್ತ ಎನ್. ರಾಮ್, ವಕೀಲ ಪ್ರಶಾಂತ್ ಭೂಷಣ್ ಮತ್ತು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಬಿಬಿಸಿಯ ಸಾಕ್ಷ್ಯಚಿತ್ರ ನಿರ್ಬಂಧಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಇದರ ವಿರುದ್ಧ ಕೇಂದ್ರ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ.

ಸುಪ್ರೀಂ ಕೋರ್ಟ್‌ನ ಅಮೂಲ್ಯ ಸಮಯವನ್ನು ಈ ರೀತಿಯಾಗಿ ವ್ಯರ್ಥ ಮಾಡಲಾಗುತ್ತಿದೆ. ಮತ್ತೊಂದೆಡೆ ಸಾವಿರಾರು ಜನರು ನ್ಯಾಯಾಲಯದ ದಿನಾಂಕಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT