News Express: ಚಂದ್ರಯಾನ–3 ಯಶಸ್ಸಿನ ಬೆನ್ನಲ್ಲೇ ಮುಂದಿನ ಯೋಜನೆ ಬಗ್ಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೊ) ಅಧ್ಯಕ್ಷ ಎಸ್.ಸೋಮನಾಥ ವಿವರಣೆ ನೀಡಿದ್ದಾರೆ. ಈ ಕುರಿತು ಸುದ್ದಿಸಂಸ್ಥೆ ಎಎನ್‌ಐ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಸೂರ್ಯನ ಅಧ್ಯಯನಕ್ಕಾಗಿ ಸೆಪ್ಟೆಂಬರ್ ಮೊದಲ ವಾರದಲ್ಲಿ ಆದಿತ್ಯ ಎಲ್–1 ಉಪಗ್ರಹ ಉಡಾವಣೆಗೆ ಸಿದ್ಧವಾಗಿದೆ ಎಂದು ಅವರು ಖಚಿತಪಡಿಸಿದ್ದಾರೆ. ಗಗನಯಾನ ಯೋಜನೆ ಇನ್ನೂ ಪ್ರಗತಿಯಲ್ಲಿದೆ. 2025ರ ವೇಳೆಗೆ, ಮಾನವಸಹಿತ ಕಾರ್ಯಾಚರಣೆ ಮಾಡುವ ಗುರಿ ಹೊಂದಿದ್ದೇವೆ. ಇದಕ್ಕೂ ಮೊದಲ ಅನೇಕ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸಬೇಕಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.