ಆಗ್ರಾ: ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಾಜ್‌ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆಯಾಗಿದ್ದು, ಆವರಣದಲ್ಲಿರುವ ಉದ್ಯಾನಕ್ಕೆ ನೀರು ನುಗ್ಗಿದೆ.
ತಾಜ್‌ಮಹಲ್ ಆವರಣದಲ್ಲಿರುವ ಉದ್ಯಾನ ಮುಳುಗಡೆಯ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
‘ತಾಜ್‌ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆಯಾಗಿದೆ. ಆದರೆ, ಸ್ಮಾರಕಕ್ಕೆ ಯಾವುದೇ ಹಾನಿಯಾಗಿಲ್ಲ. ಡ್ರೋನ್ ಕ್ಯಾಮೆರಾ ಮೂಲಕ ಪರಿಶೀಲನೆ ನಡೆಸುತ್ತಿದ್ದೇವೆ’ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಹಿರಿಯ ಅಧಿಕಾರಿ ರಾಜ್‌ಕುಮಾರ್ ಪಟೇಲ್ ತಿಳಿಸಿದ್ದಾರೆ.