ಕೊಲ್ಕತ್ತ: ಇಲ್ಲಿನ ವಿಮಾನ ನಿಲ್ದಾಣದಲ್ಲಿ 103 ಪ್ರಯಾಣಿಕರಿದ್ದ ಕತಾರ್ ಏರ್ವೇಸ್ ವಿಮಾನಕ್ಕೆ ಗುರುವಾರ ಬೆಳಗ್ಗಿನ ಜಾವ ನೀರಿನ ಟ್ಯಾಂಕರ್ ಡಿಕ್ಕಿ ಹೊಡೆದಿದೆ.

ದೋಹಾಕ್ಕೆ ತೆರಳಲು ಸಿದ್ಧವಾಗಿದ್ದ ವಿಮಾನದ ಅಡಿ ಭಾಗಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿ, ವಿಮಾನವನ್ನು ಪರಿಶೀಲಿಸಲಾಯಿತು. ಯಾರೂ ಗಾಯಗೊಂಡಿಲ್ಲ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (ಎಎಐ) ಅಧಿಕಾರಿಗಳು ತಿಳಿಸಿದ್ದಾರೆ.

‘ಪ್ರಯಾಣಿಕರಿಗೆ ವಿಮಾನ ನಿಲ್ದಾಣ ಸಮೀಪದ ಹೋಟೆಲ್ನಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಶುಕ್ರವಾರ ಅವರು ದೋಹಾಕ್ಕೆ ತೆರಳಲಿದ್ದಾರೆ’ ಎಂದಿದ್ದಾರೆ.

ಬ್ರೇಕ್ ವೈಫಲ್ಯದಿಂದಾಗಿ ಟ್ಯಾಂಕರ್ ವಿಮಾನಕ್ಕೆ ಡಿಕ್ಕಿ ಹೊಡೆದಿದೆ ಎಂದೂ ಹೇಳಿದ್ದಾರೆ.

ಈ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.