ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ದೇಶದಾದ್ಯಂತ ಬದಲಾವಣೆಯ ಅಲೆ: ಮುಕುಲ್‌ ವಾಸ್ನಿಕ್‌

Published 22 ಮೇ 2024, 14:24 IST
Last Updated 22 ಮೇ 2024, 14:24 IST
ಅಕ್ಷರ ಗಾತ್ರ

ಅಹಮದಾಬಾದ್‌: ದೇಶದಾದ್ಯಂತ ಬದಲಾವಣೆಯ ಅಲೆ ಎದ್ದಿದ್ದು, ಗುಜರಾತ್‌ನಲ್ಲಿ ಪಕ್ಷವು 10ಕ್ಕಿಂತಲೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಮುಕುಲ್‌ ವಾಸ್ನಿಕ್‌ ಬುಧವಾರ ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ಜನರು ರೋಷಗೊಂಡಿದ್ದಾರೆ ಎಂದಿರುವ ಅವರು, ಗುಜರಾತ್‌ನ ಜನರು ಕಾಂಗ್ರೆಸ್‌ ಅನ್ನು ಬೆಂಬಲಿಸಲಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಗುಜರಾತ್‌ನ 26 ಲೋಕಸಭಾ ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆದಿತ್ತು. ಸೂರತ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್‌ 23 ಕ್ಷೇತ್ರಗಳಲ್ಲಿ ಹಾಗೂ ಎಎಪಿ ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT