ವಯನಾಡ್ (ಕೇರಳ): ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ವಯನಾಡ್ನ ಕಾಂಗ್ರೆಸ್ ಕಚೇರಿ ಮತ್ತು ಹತ್ತಿರದ ಪ್ರದೇಶಗಳ ಗೋಡೆಗಳ ಮೇಲೆ ಅವಹೇಳನಕಾರಿ ಪೋಸ್ಟರ್ ಅಂಟಿಸಿರುವುದರ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಶಾಸಕ ಟಿ ಸಿದ್ದಿಕ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಕಲ್ಪೆಟ್ಟ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

ಎಫ್ಐಆರ್ ಪ್ರಕಾರ, ಮುಂದಿನ ಕೇರಳ ಮುಖ್ಯಮಂತ್ರಿಯ ಆಯ್ಕೆಯ ಬಗ್ಗೆ ಅನಿಶ್ಚಿತತೆ ಇದ್ದಾಗ ಮೇ 13ರಂದು ವಯನಾಡ್ ಡಿಸಿಸಿ ಕಚೇರಿಯ ಕಾಂಪೌಂಡ್ ಗೋಡೆ ಮತ್ತು ಹತ್ತಿರದ ಪ್ರದೇಶಗಳಲ್ಲಿ ಪಕ್ಷದ ಮೂವರೂ ನಾಯಕರನ್ನು ಗುರಿಯಾಗಿಸಿಕೊಂಡು ಪೋಸ್ಟರ್ ಹಾಕಲಾಗಿತ್ತು.

ವಯನಾಡ್ನ ಸಂಸದರಾಗಿರುವ ವಾದ್ರಾ ಮುಂದಿನ ಚುನಾವಣೆಯಲ್ಲಿ ಸೋಲುತ್ತಾರೆ ಎಂದು ಪೋಸ್ಟರ್ಗಳಲ್ಲಿ ಬೆದರಿಕೆ ಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದು ಪೋಸ್ಟರ್ನಲ್ಲಿ ‘ವಯನಾಡ್ ಮುಂದಿನ ಅಮೇಥಿ ಆಗಲಿದೆ’ ಎಂದೂ ಬರೆಯಲಾಗಿತ್ತು.

ಘಟನೆಯ ನಂತರ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ಗಳನ್ನು ಕಿತ್ತು ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ ಮತ್ತು ಕೇರಳ ಪೊಲೀಸ್ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಗೋಡೆಗಳ ಮೇಲೆ ವ್ಯಕ್ತಿಯೊಬ್ಬ ಪೋಸ್ಟರ್ಗಳನ್ನು ಅಂಟಿಸುತ್ತಿರುವ ಸಿಸಿಟಿವಿ ದೃಶ್ಯಾವಳಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆತನನ್ನು ಗುರುತಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.