ವಯನಾಡ್: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಯುಡಿಎಫ್ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗೆಲುವಿನ ನಗೆ ಬೀರಿದ್ದಾರೆ.

ಅವರು ಸುಮಾರು 3.82 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ವಿಶೇಷವೆಂದರೆ ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇದೇ ಕ್ಷೇತ್ರದಲ್ಲಿ ಪ್ರಿಯಾಂಕಾ ಸಹೋದರ ರಾಹುಲ್ ಪಡೆದಿದ್ದ ಮತಗಳಿಗಿಂತಲೂ ಪ್ರಿಯಾಂಕಾ ಹೆಚ್ಚಿನ ಮತಗಳಿಂದ ಚುನಾಯಿತರಾಗಿದ್ದಾರೆ.

ಪ್ರಿಯಾಂಕಾ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಎಲ್ಡಿಎಫ್ನ ಸತ್ಯನ್ ಮೊಕೇರಿ ಅವರನ್ನು ಸೋಲಿಸಿದ್ದಾರೆ. ವಿಶೇಷ ಎಂದರೆ ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್ ಅವರು 1 ಲಕ್ಷ ಮತಗಳನ್ನು ಪಡೆದಿದ್ದಾರೆ.

‘ವಯನಾಡ್ ಕ್ಷೇತ್ರದ ಮತದಾರರು ಕಾಂಗ್ರೆಸ್ ಚಿಹ್ನೆಗೆ ಮತ ಹಾಕಿದ್ದಾರೆಯೇ ಹೊರತು, ಅಭ್ಯರ್ಥಿಗಲ್ಲ’ ಎಂದು ನವ್ಯಾ ಹೇಳುವ ಮೂಲಕ ಪ್ರಿಯಾಂಕಾ ಗಾಂಧಿ ಕಾಲೆಳೆದಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಈ ಕ್ಷೇತ್ರದಿಂದ 3.64 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ್ದರು. ಆದರೆ ರಾಯಬರೇಲಿ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಅವರು, ಅಂತಿಮವಾಗಿ ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಡಲು ನಿರ್ಧರಿಸಿ ರಾಜೀನಾಮೆ ನೀಡಿದ್ದರು.

ಕಳೆದ ಚುನಾವಣೆಯಲ್ಲಿ ರಾಹುಲ್ ಗಾಂಧಿ 6,47,445 ಮತಗಳನ್ನು ಪಡೆದಿದ್ದರು. ಅವರ ಪ್ರತಿಸ್ಪರ್ಧಿ ಸಿಪಿಐನ ಅನ್ನಿ ರಾಜಾ ಅವರನ್ನು 3,64,422 ಮತಗಳ ಅಂತರದಿಂದ ರಾಹುಲ್ ಸೋಲಿಸಿದ್ದರು.

ರಾಹುಲ್ ಸಹೋದರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಅವರನ್ನು ವಯನಾಡ್ನಿಂದ ಕಣಕ್ಕಿಳಿಸಲಾಗಿತ್ತು. ಈ ಕ್ಷೇತ್ರವನ್ನು ಕಾಂಗ್ರೆಸ್ ಉಳಿಸಿಕೊಂಡಿದೆ.

ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ನ ಪ್ರಿಯಾಂಕಾ ಗಾಂಧಿ ವಾದ್ರಾ, ಸಿಪಿಐನ ಸತ್ಯನ್ ಮೊಕೇರಿ ಹಾಗೂ ಬಿಜೆಪಿಯ ನವ್ಯಾ ಹರಿದಾಸ್ ಸೇರಿದಂತೆ ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿದ್ದರು. ನವೆಂಬರ್ 13ಕ್ಕೆ ಮತದಾನ ನಡೆದಿತ್ತು.

ಕೇರಳ ವಿಧಾನಸಭಾ ಉಪಚುನಾವಣೆ ಫಲಿತಾಂಶ

ಕೇರಳದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಪಾಲಕ್ಕಾಡ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಮಮಕೂಟತ್ತಿಲ್ ಗೆಲುವು ಕಂಡಿದ್ದಾರೆ.

ಚೇಲಕ್ಕರ ಕ್ಷೇತ್ರದಲ್ಲಿ ಎಲ್ಡಿಎಫ್ನ ಯು.ಆರ್. ಪ್ರದೀಪ್ ಗೆಲುವು ಕಂಡಿದ್ದಾರೆ.
.ವಯನಾಡ್ ಮತದಾನ: ಸಂತ್ರಸ್ತರ ಭಾವನಾತ್ಮಕ ದೃಶ್ಯಗಳಿಗೆ ಸಾಕ್ಷಿಯಾದ ಮತಗಟ್ಟೆ.ವಯನಾಡ್ | ಎಲ್ಲರೂ ತಿರುಗಿ ಬಿದ್ದರೂ ನೀವು ರಾಹುಲ್ ಕೈ ಹಿಡಿದಿದ್ದೀರಿ: ಪ್ರಿಯಾಂಕಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.