ವಯನಾಡ್ (ಕೇರಳ): ವಯನಾಡ್ನಲ್ಲಿ ಸಂಭವಿಸಿದ್ದ ಭೂಕುಸಿತದ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಮಾದರಿ ಟೌನ್ಶಿಪ್ ನಿರ್ಮಾಣಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು.

ಇಲ್ಲಿನ ಕಲ್ಪೆಟ್ಟದ ಎಲ್ಸ್ಟೋನ್ ಎಸ್ಟೇಟ್ನಲ್ಲಿ ಸರ್ಕಾರ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ಮಾದರಿ ಟೌನ್ಶಿಪ್ ನಿರ್ಮಿಸಲಾಗುತ್ತಿದೆ.

ಕಲ್ಪೆಟ್ಟ ಬೈಪಾಸ್ ಬಳಿ ಸರ್ಕಾರ ಸ್ವಾಧೀನಪಡಿಸಿಕೊಂಡಿರುವ 64 ಹೆಕ್ಟೇರ್ ಪ್ರದೇಶದಲ್ಲಿ ‘ಟೌನ್ಶಿಪ್’ ನಿರ್ಮಾಣವಾಗಲಿದ್ದು, ತಲಾ 7 ಸೆಂಟ್ಸ್ ಜಾಗದಲ್ಲಿ 100 ಚದರ ಅಡಿ ವಿಸ್ತೀರ್ಣದ ಒಂದೇ ಅಂತಸ್ತಿನ ಮನೆಗಳನ್ನು ನಿರ್ಮಿಸಲಾಗುತ್ತದೆ.

ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉಪಸ್ಥಿತರಿದ್ದರು.

2024ರ ಜುಲೈ 30 ರಂದು ವಯನಾಡ್ನಲ್ಲಿ ಸಂಭವಿಸಿದ್ದ ಭೀಕರ ಭೂಕುಸಿತದಿಂದ ಮುಂಡಕ್ಕೈ ಮತ್ತು ಚೂರಲ್ಮಲ ಪ್ರದೇಶಗಳು ಸಂಪೂರ್ಣವಾಗಿ ನಾಶವಾಗಿದ್ದವು. ಘಟನೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು.
.Wayanad landslide | ಕೇಂದ್ರದಿಂದ ಇನ್ನೂ ನೆರವು ಬಂದಿಲ್ಲ: ಪಿಣರಾಯಿ ವಿಜಯನ್ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.