ಕಾಂತಿ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಗಮನಾರ್ಹ ಬೆಳವಣಿಗೆಯೊಂದರಲ್ಲಿ ಕಾಂತಿ ಪುರಸಭೆ ಕಚೇರಿಯಿಂದ ಲಕ್ಷಾಂತರ ಮೌಲ್ಯದ ಪರಿಹಾರ ಸಾಮಾಗ್ರಿಗಗಳನ್ನು ಕದ್ದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಸುವೇಂದು ಅಧಿಕಾರಿ ಮತ್ತು ಅವರ ಸಹೋದರ ಸೌಮೇಂದು ಅಧಿಕಾರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಕಾಂತಿ ಪುರಸಭೆ ಆಡಳಿತ ಮಂಡಳಿಯ ಸದಸ್ಯ ರತ್ನಾದೀಪ್ ಮನ್ನಾ ಅವರ ದೂರಿನ ಮೇರೆಗೆ ಸುವೇಂದು ಅಧಿಕಾರಿ ಮತ್ತವರ ಸೋದರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಚುನಾವಣೆ ತಂತ್ರಗಾರಿಕೆ ಮಾಡಲ್ಲ ಎಂದಿದ್ದ ಪ್ರಶಾಂತ್ ಕಿಶೋರ್ ಟಿಎಂಸಿ ಸಭೆಯಲ್ಲಿ!

2021 ಮೇ 29 ಮಧ್ಯಾಹ್ನ 12.30ಕ್ಕೆ ಸುವೇಂದು ಅಧಿಕಾರಿ ಹಾಗೂ ಸೌಮೇಂದು ಅಧಿಕಾರಿ ನಿರ್ದೇಶನದಂತೆ ಪುರಸಭೆ ಕಚೇರಿ ಗೋಡೌನ್ ಅನ್ನು ಬಲವಂತವಾಗಿ ತೆರೆದು ಲಕ್ಷಾಂತರ ರೂಪಾಯಿ ಮೌಲ್ಯದ ಪರಿಹಾರ ಸಾಮಾಗ್ರಿಗಳನ್ನು ಒಯ್ಯಲಾಗಿದೆ ಎಂದು ದೂರಲಾಗಿದೆ.

ಈ ಕಳ್ಳತನಕ್ಕೆ ಬಿಜೆಪಿ ನಾಯಕರು ಕೇಂದ್ರದ ಸಶಸ್ತ್ರ ಪಡೆಯ ನೆರವನ್ನು ಬಳಕೆ ಮಾಡಿದ್ದಾರೆ ಎಂದು ದೂರಿನಲ್ಲಿಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.