ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ತೀರ್ಪನ್ನು ಮನಃಪೂರ್ವಕವಾಗಿ ಒಪ್ಪಿಕೊಳ್ಳುತ್ತೇವೆ: ನವೀನ್ ಪಟ್ನಾಯಕ್‌

Published 8 ಜೂನ್ 2024, 9:01 IST
Last Updated 8 ಜೂನ್ 2024, 9:01 IST
ಅಕ್ಷರ ಗಾತ್ರ

ಭುವನೇಶ್ವರ: ಜನರ ತೀರ್ಪನ್ನು ಮನಃಪೂರ್ವಕವಾಗಿ ಒಪ್ಪಿಕೊಳ್ಳುತ್ತೇವೆ ಎಂದು ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್‌ ಶನಿವಾರ ಹೇಳಿದ್ದಾರೆ. ಅಲ್ಲದೆ ಸಾಧ್ಯ ಇರುವ ಎಲ್ಲಾ ವಿಧಗಳಲ್ಲಿ ಒಡಿಶಾದ ಜನರ ಸೇವೆ ಮಾಡುವುದನ್ನು ಮುಂದುವರಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಪಿಟಿಐ ಸುದ್ದಿಸಂಸ್ಥೆ ಜೊತೆ ಮಾತನಾಡಿರುವ ಅವರು, ‘ನಾವು ನಮ್ಮ ಪ್ರಯತ್ನ ಮಾಡಿದ್ದೇವೆ. ಉತ್ತಮ ಕೆಲಸವನ್ನೂ ಮಾಡಿದ್ದೇವೆ. ನಮ್ಮ ಸರ್ಕಾರ ಹಾಗೂ ‍ಪಕ್ಷದ ಬಗ್ಗೆ ನಮಗೆ ಅತೀವ ಹೆಮ್ಮೆ ಇದೆ. ಪ್ರಜಾಪ್ರಭುತ್ವದಲ್ಲಿ ನೀವು ಒಂದೋ ಸೋಲಬೇಕು ಅಥವಾ ಗೆಲ್ಲಬೇಕು’ ಎಂದು ಹೇಳಿದ್ದಾರೆ.

ಸುದೀರ್ಘ ಅವಧಿಯ ಬಳಿಕ ನಾವು ಸೋಲನುಭವಿಸಿದ್ದೇವೆ. ಜನರ ತೀರ್ಪನ್ನು ನಾವು ಯಾವತ್ತೂ ಮನಃಪೂರ್ವಕವಾಗಿ ಸ್ವೀಕರಿಸಲೇಬೇಕು. ಒಡಿಶಾದ 4.5 ಕೋಟಿ ಜನರೆಲ್ಲರೂ ನನ್ನ ಕುಟುಂಬ ಎಂದು ನಾನು ಹಲವು ಬಾರಿ ಹೇಳಿದ್ದೇನೆ. ಸಾಧ್ಯವಿರುವ ಎಲ್ಲಾ ರೀತಿಯಲ್ಲಿ ಅವರ ಸೇವೆ ಮಾಡುವುದನ್ನು ನಾನು ಮುಂದುವರಿಸುತ್ತೇನೆ’ ಎಂದು ನುಡಿದಿದ್ದಾರೆ.

ಒಡಿಶಾದ ಜನರು ನನಗೆ ಪದೇ ಪದೇ ಆಶೀರ್ವಾದದ ಮಳೆಯನ್ನೇ ಸುರಿಸಿದ್ದಾರೆ. ಅವರಿಗೆ ನಾನು ಋಣಿ ಎಂದು ನವೀನ್ ಪಟ್ನಾಯಕ್ ಹೇಳಿದ್ದಾರೆ.

ಸತತ 24 ವರ್ಷಗಳ ಕಾಲ ಒಡಿಶಾದ ಮುಖ್ಯಮಂತ್ರಿಯಾಗಿದ್ದ ನವೀನ್ ಪಟ್ನಾಯಕ್‌, ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆ‍ಪಿ ವಿರುದ್ಧ ಸೋಲನುಭವಿಸಿ ಅಧಿಕಾರ ಕಳೆದುಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT