ನಾಮ್‌ಸಾಯಿ (ಅರುಣಾಚಲ ಪ್ರದೇಶ): ಹಿಂದು ಯಾತ್ರಾಸ್ಥಳ ಪರಶುರಾಮ ಕುಂಡ್‌ಗೆ ರೈಲ್ವೆ ಸಂಪರ್ಕ ಕಲ್ಪಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.

ಅರುಣಾಚಲ ಪ್ರದೇಶದ ನಾಮ್‌ಸಾಯಿಯಲ್ಲಿ ಮಾತನಾಡಿದ ಅವರು, ‘ಪರಶುರಾಮ ಕುಂಡ್‌ಗೆ ರೈಲ್ವೆ ಸಂಪರ್ಕ ಕಲ್ಪಿಸಲಿದ್ದೇವೆ. ರಾಜ್ಯದಾದ್ಯಂತ ಉತ್ತಮ ರಸ್ತೆ ಸಂಪರ್ಕ ಕಲ್ಪಿಸಲಿದ್ದೇವೆ. ರಾಜ್ಯದ ದೂರದ ಸ್ಥಳಗಳನ್ನು ಸಂಪರ್ಕಿಸಲು ಅನುವು ಮಾಡಿಕೊಡಲಿದ್ದೇವೆ’ ಎಂದು ತಿಳಿಸಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ 9,600 ತೀವ್ರವಾದಿಗಳು ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಮರಳಿದ್ದಾರೆ. ನಮ್ಮ ಸರ್ಕಾರವು ಈಶಾನ್ಯದಲ್ಲಿ ವಿವಾದಗಳನ್ನು ಕೊನೆಗಾಣಿಸಿ ಶಾಂತಿ ನೆಲೆಸುವಂತೆ ಮಾಡುವ ಉದ್ದೇಶ ಹೊಂದಿದೆ. ಬಿಜೆಪಿ ಸರ್ಕಾರವು ಈಶಾನ್ಯ ರಾಜ್ಯಗಳಲ್ಲಿ ಭಯೋತ್ಪಾದನೆ ಪ್ರಮಾಣವನ್ನು ಶೇ 89ರಷ್ಟು ಕಡಿಮೆ ಮಾಡಿದೆ ಎಂದು ಅಮಿತ್ ಶಾ ಹೇಳಿರುವುದಾಗಿ ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಅರುಣಾಚಲ ಪ್ರದೇಶ ಮತ್ತು ಅಸ್ಸಾಂ ನಡುವಿನ ಅಂತರರಾಜ್ಯ ಗಡಿ ವಿವಾದವು 2023 ರ ಮೊದಲೇ ಬಗೆಹರಿಯುವ ನಿರೀಕ್ಷೆ ಇದೆ ಎಂದು ಗೃಹ ಸಚಿವರು ಶನಿವಾರ ಹೇಳಿದ್ದರು.

ಅಸ್ಸಾಂ–ಅರುಣಾಚಲ ಪ್ರದೇಶ ಗಡಿ ವಿವಾದ 2023ರ ವೇಳೆಗೆ ಬಗೆಹರಿಯುವ ನಿರೀಕ್ಷೆ: ಶಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.