ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಕ್ಷಣಾ ಕ್ಷೇತ್ರದಲ್ಲೂ ಸ್ವಾವಲಂಬನೆ: ಪ್ರಧಾನಿ ಮೋದಿ

ಎಚ್‌ಎಎಲ್ ಹೆಲಿಕಾಪ್ಟರ್‌ ಘಟಕ: ಮೋದಿ ಲೋಕಾರ್ಪಣೆ
Last Updated 6 ಫೆಬ್ರುವರಿ 2023, 21:38 IST
ಅಕ್ಷರ ಗಾತ್ರ

ತುಮಕೂರು: ರಕ್ಷಣಾ ಕ್ಷೇತ್ರದಲ್ಲೂ ದೇಶ ಸ್ವಾವಲಂಬನೆಯತ್ತ ಹೆಜ್ಜೆ ಹಾಕಿದ್ದು, ಮುಂದಿನ ದಿನಗಳಲ್ಲಿ ವಿದೇಶಗಳ ಅವಲಂಬನೆ ಕಡಿಮೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸವ್ಯಕ್ತಪಡಿಸಿದರು.

ಗುಬ್ಬಿ ತಾಲ್ಲೂಕಿನ ಬಿದರೆಹಳ್ಳ ಕಾವಲ್ ಬಳಿ ನಿರ್ಮಿಸಿರುವ ಎಚ್‌ಎಎಲ್ ಹೆಲಿಕಾಪ್ಟರ್‌ ತಯಾರಿಕೆ ಘಟಕವನ್ನು ಸೋಮವಾರ ದೇಶಕ್ಕೆ ಸಮರ್ಪಿಸಿ ಅವರು ಮಾತನಾಡಿದರು.

‘ಹಿಂದಿನ ದಿನಗಳಲ್ಲಿ ಸೇನೆ ಮತ್ತು ರಕ್ಷಣಾ ಕ್ಷೇತ್ರಕ್ಕೆ ಬೇಕಾದ ಶೇ 90ರಷ್ಟು ಸಾಮಗ್ರಿಗಳನ್ನು ಆಮದು ಮಾಡಿಕೊಳ್ಳಲಾಗುತಿತ್ತು. ಈಗ ಅದನ್ನು ಶೇ 60ರಷ್ಟಕ್ಕೆ ಇಳಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಪ್ರಮಾಣವನ್ನು ಮತ್ತಷ್ಟು ತಗ್ಗಿಸಲಾಗುವುದು. ವಿದೇಶಗಳ ಅವಲಂಬನೆ ಕಡಿಮೆ ಮಾಡಿ, ದೇಶದ ರಕ್ಷಣಾ ಕ್ಷೇತ್ರ ವನ್ನು ಸ್ವಾವಲಂಬಿ ಮಾಡುವುದೇ ನಮ್ಮ ಗುರಿ’ ಎಂದರು.

‘ರಫೇಲ್‌ ಯುದ್ಧ ವಿಮಾನ ಖರೀದಿ ಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪ ಮಾಡಿದರು. ಎಚ್‌ಎಎಲ್ ಮಾರಾಟ ಮಾಡಲಾಗುತ್ತಿದೆ ಎಂದು ಹುಯಿಲೆಬ್ಬಿಸಿದರು. ಹತ್ತು ಬಾರಿ ಸುಳ್ಳು ಹೇಳಿ, ನಿಜ ಮಾಡಲು ಹೊರಟವರಿಗೆ ಈಗ ಎಚ್‌ಎಎಲ್ ಘಟಕ ಸ್ಥಾಪಿಸಿ, ಹೆಲಿಕಾಪ್ಟರ್‌ ತಯಾರಿಕೆ ಆರಂಭಿಸುವ ಮೂಲಕ ಉತ್ತರ ನೀಡಿದ್ದೇವೆ’ ಎಂದು ಪ್ರಧಾನಿ ಹೇಳಿದರು.

ಗುಬ್ಬಿ ಘಟಕದಲ್ಲಿ ದೊಡ್ಡಮಟ್ಟ ದಲ್ಲಿ ಹೆಲಿಕಾಪ್ಟರ್ ತಯಾರಿಸುವ ಮೂಲಕ ಟೀಕಾಕಾರರಿಗೆ ತಕ್ಕ ಉತ್ತರ ನೀಡಲಾಗುವುದು. ಎಲ್ಲವನ್ನೂಅಭಿವೃದ್ಧಿ ಮೂಲಕ ಮಾಡಿ ತೋರಿಸು ತ್ತೇವೆ ಎಂದು ವಿರೋಧ ಪಕ್ಷಗಳಿಗೆ ಕುಟುಕಿದರು.

ರಾಜ್ಯದ ತಂತ್ರಜ್ಞರು, ಎಂಜಿನಿಯರು ಗಳು ತೇಜಸ್‌ನಂತಹ ಯುದ್ಧ ವಿಮಾನ ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಇದು ದೇಶದ ಸೇನೆಯ ಆತ್ಮಬಲ ಹೆಚ್ಚಿಸಿದೆ. ಮುಂದಿನ ದಿನಗಳಲ್ಲಿ₹ 4 ಲಕ್ಷ ಕೋಟಿ ವಹಿವಾಟು ನಡೆಸುವ ಸಂಸ್ಥೆಯನ್ನಾಗಿ ರೂಪಿಸಿ ಎಚ್‌ಎಎಲ್‌ಗೆ ಮತ್ತಷ್ಟು ಶಕ್ತಿ ತುಂಬಲಾಗುವುದು ಎಂದು ಅವರು ಭರವಸೆ ನೀಡಿದರು.

35 ನಿಮಿಷದ ಭಾಷಣದಲ್ಲಿ ದೇಶದ ಪ್ರಗತಿ, ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಸ್ತಾಪಿಸುತ್ತಲೇ ವಿರೋಧಿಗಳನ್ನೂ ಟೀಕಿಸಿದರು. ‘ಡಬಲ್ ಎಂಜಿನ್ ಸರ್ಕಾರ ಅಧಿಕಾರದಲ್ಲಿ ಇದ್ದರೆ ಪ್ರಗತಿ ಸಾಧ್ಯವಾಗಲಿದೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರಬೇಕು’ ಎಂದು ಕೇಳುತ್ತಲೇ ಮತಯಾಚನೆಯನ್ನೂ ಮಾಡಿದರು.

ಕರ್ನಾಟಕದ ಅಭಿವೃದ್ಧಿ ಮಾದರಿ ಗಮನಿಸಿದರೆ ಭಾರತ ಯಾವ ರೀತಿ ಪ್ರಗತಿ ಹೊಂದುತ್ತಿದೆ ಎಂದು ತಿಳಿ ಯುತ್ತದೆ. ರಕ್ಷಣಾ ಉಪಕರಣ ತಯಾ ರಿಕೆಯಲ್ಲೂ ಮುಂಚೂಣಿಯಲ್ಲಿದ್ದು, ಎಚ್‌ಎಎಲ್ ಘಟಕದಲ್ಲಿ ಶಕ್ತಿಶಾಲಿ ಹೆಲಿಕಾಪ್ಟರ್‌ ತಯಾರಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT