ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿ.ವಿ. ನರಸಿಂಹ ರಾವ್ ಅವರಿಗೆ ಭಾರತ ರತ್ನ: ಸ್ವಾಗತಿಸಿದ ಸೋನಿಯಾ ಗಾಂಧಿ

Published 9 ಫೆಬ್ರುವರಿ 2024, 9:56 IST
Last Updated 9 ಫೆಬ್ರುವರಿ 2024, 9:56 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ಪ್ರಧಾನಿ ಪಿ.ವಿ. ನರಸಿಂಹ ರಾವ್ ಅವರಿಗೆ ಭಾರತ ರತ್ನ(ಮರಣೋತ್ತರ) ಘೋಷಣೆ ಮಾಡಿರುವುದನ್ನು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಸ್ವಾಗತಿಸಿದ್ದಾರೆ.

ಭಾರತ ರತ್ನ ಪ್ರಶಸ್ತಿಗಳ ಘೋಷಣೆ, ಅದರಲ್ಲೂ ಪಿವಿಎನ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ ಸಿಕ್ಕಿರುವ ಬಗ್ಗೆ ಸಂಸತ್ ಭವನದ ಹೊರಗಡೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಅದನ್ನು ಸ್ವಾಗತಿಸುತ್ತೇನೆ, ಯಾಕಾಗಬಾರದು’ ಎಂದು ಪ್ರತಿಕ್ರಿಯಿಸಿದ್ದಾರೆ.

ಮಾಜಿ ಪ್ರಧಾನಿಗಳಾದ ಪಿ.ವಿ. ನರಸಿಂಹ ರಾವ್, ಚೌಧರಿ ಚರಣ್ ಸಿಂಗ್ ಮತ್ತು ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಗೌರವ ನೀಡಲಾಗುವುದು ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.

ಪಿ.ವಿ. ನರಸಿಂಹ ರಾವ್, ಚೌಧರಿ ಚರಣ್ ಸಿಂಗ್ ಮತ್ತು ಎಂ.ಎಸ್. ಸ್ವಾಮಿನಾಥನ್ ಎಂದಿಗೂ ಭಾರತದ ರತ್ನಗಳೇ. ದೇಶಕ್ಕೆ ಅವರ ಕೊಡುಗೆಗಳು ಅಭೂತಪೂರ್ವವಾದವುಗಳಾಗಿದ್ದು, ಎಲ್ಲ ಭಾರತೀಯರು ಅವರನ್ನು ಗೌರವಿಸುತ್ತಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಶ್ರಮಿಸಿದ್ದ ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್, ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್..ಕೆ. ಅಡ್ವಾಣಿಯವರಿಗೂ ಇತ್ತೀಚೆಗೆ ಭಾರತ ರತ್ನ ಘೋಷಣೆ ಮಾಡಲಾಗಿತ್ತು.

1999ರಲ್ಲಿ 4 ಭಾರತರತ್ನ ಘೋಷಣೆ ಮಾಡಲಾಗಿತ್ತು. ಈ ವರ್ಷ ಐದು ಮಂದಿಗೆ ಭಾರತ ರತ್ನ ಘೋಷಣೆ ಮಾಡಲಾಗಿದ್ದು, ಒಂದು ವರ್ಷದಲ್ಲಿ ಘೋಷಣೆಯಾದ ಅತಿ ಹೆಚ್ಚು ಭಾರತ ರತ್ನ ಪ್ರಶಸ್ತಿಗಳು ಇವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT