ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ವಾಯುಪ್ರದೇಶ ನಿರ್ಬಂಧದಿಂದಾಗಿ ದೆಹಲಿ ಮತ್ತು ಮುಂಬೈನಿಂದ ತೆರಳಬೇಕಿದ್ದ 225 ಸೇರಿದಂತೆ ಭಾರತದಿಂದ ತೆರಳಬೇಕಿದ್ದ 350 ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ರದ್ದಾಗಿದೆ ಎಂದು ವರದಿಯಾಗಿದೆ.

ಪಶ್ಚಿಮ ಏಷ್ಯಾ ದೇಶಗಳಿಗೆ ತೆರಳಬೇಕಿದ್ದ 444 ಅಂತರರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸುವ ನಿರೀಕ್ಷೆಯಿತ್ತು. ಸದ್ಯ 350 ವಿಮಾನಗಳನ್ನು ರದ್ದುಪಡಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಶನಿವಾರವೂ ದೇಶೀಯ ವಿಮಾನಯಾನ ಸಂಸ್ಥೆಗಳ 410 ವಿಮಾನಗಳನ್ನು ರದ್ದುಗೊಳಿಸಲಾಗಿತ್ತು.

‘ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇವೆ. ಅಗತ್ಯಕ್ಕೆ ತಕ್ಕಂತೆ ಕಾರ್ಯಾಚರಣೆ ಆರಂಭಿಸಲಾಗುತ್ತದೆ. ಪ್ರಯಾಣಿಕರಿಗೆ ಸೂಕ್ತ ವ್ಯವಸ್ಥೆ ಒದಗಿಸುವಂತೆ ವಿಮಾನಯಾನ ಸಂಸ್ಥೆಗಳು, ವಿಮಾನ ನಿಲ್ದಾಣ ನಿರ್ವಾಹಕರು ಮತ್ತು ಇತರ ಪಾಲುದಾರರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಿಂದ ತೆರಳಬೇಕಿದ್ದ 60 ಮತ್ತು ಆಗಮಿಸಬೇಕಿದ್ದ 40 ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ರದ್ದಾಗಿದೆ. ಮುಂಬೈ ವಿಮಾನ ನಿಲ್ದಾಣದಿಂದ ತೆರಳಬೇಕಿದ್ದ 67 ಮತ್ತು ಆಗಮಿಸಬೇಕಿದ್ದ 58 ವಿಮಾನಗಳ ಹಾರಾಟ ರದ್ದಾಗಿದೆ.
.ಖಮೇನಿ ಮಗನಿಗಿಲ್ಲ ಸರ್ವೋಚ್ಚ ನಾಯಕನ ಪಟ್ಟ: ಇರಾನ್ ಆಡಳಿತದ ಚುಕ್ಕಾಣಿ ಈತನ ಕೈಗೆ!.ಖಮೇನಿ ಹತ್ಯೆ | ಅಮೆರಿಕ-ಇಸ್ರೇಲ್ ವಿರುದ್ಧ ಅಕ್ರೋಶ: ಕಾಶ್ಮೀರದಲ್ಲಿ ಪ್ರತಿಭಟನೆ.ಅಯಾತೊಲ್ಲಾ ಖಮೇನಿ ಇದ್ದ ಜಾಗದ ಮೇಲೆ ಇಸ್ರೇಲ್ ನಡೆಸಿದ ಭೀಕರ ದಾಳಿ ವಿಡಿಯೊ ಬಹಿರಂಗ!.ಖಮೇನಿ ಹತ್ಯೆಗೆ ಖಂಡನೆ: ಪಾಕ್ನಲ್ಲಿ ಅಮೆರಿಕ ರಾಯಭಾರ ಕಚೇರಿ ಧ್ವಂಸ; 10 ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.