ನವದೆಹಲಿ: ಅಮೆರಿಕ–ಇಸ್ರೇಲ್ ಸೇನೆಗಳು ಇರಾನ್ ಮೇಲೆ ನಿರಂತರ ದಾಳಿ ನಡೆಸಿರುವುದರಿಂದ ಪಶ್ಚಿಮ ಏಷ್ಯಾ ಬಿಕ್ಕಟ್ಟು ದಿನದಿಂದ ದಿನಕ್ಕೆ ವಿಷಮಗೊಳ್ಳುತ್ತಿದೆ. ಇದರ ಬೆನ್ನಲ್ಲೇ ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಘ್ಚಿ ಅವರೊಂದಿಗೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾತುಕತೆ ನಡೆಸಿದ್ದಾರೆ.

‘ಹೊರ್ಮುಜ್’ ಜಲಸಂಧಿಯ ವಾಸ್ತವಿಕ ದಿಗ್ಬಂಧನದ ನಡುವೆಯೂ ಇಂಧನ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳುವ ಪ್ರಯತ್ನ ಭಾಗವಾಗಿ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ಪಶ್ಚಿಮ ಏಷ್ಯಾ ಬಿಕ್ಕಟ್ಟು ಪ್ರಾರಂಭವಾದ ನಂತರ ಉಭಯ ನಾಯಕರ ಮೂರನೇ ಸಂಭಾಷಣೆ ಇದಾಗಿದೆ.

ಪಶ್ಚಿಮ ಏಷ್ಯಾದ ಆಚೆಗೂ ವಿಸ್ತರಿಸಿರುವ ಯುದ್ಧದಿಂದಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿದ್ದು, ಜಾಗತಿಕ ಅರ್ಥ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಜೈಶಂಕರ್ ಅವರು ಜರ್ಮನ್ ವಿದೇಶಾಂಗ ಸಚಿವ ಜೋಹಾನ್ ವಾಡೆಫುಲ್ ಮತ್ತು ದಕ್ಷಿಣ ಕೊರಿಯಾದ ವಿದೇಶಾಂಗ ಸಚಿವ ಚೋ ಹ್ಯುನ್ ಅವರೊಂದಿಗೆ ಪಶ್ಚಿಮ ಏಷ್ಯಾದಲ್ಲಿ ಉಂಟಾಗುತ್ತಿರುವ ಬಿಕ್ಕಟ್ಟಿನ ಕುರಿತು ಚರ್ಚೆ ನಡೆಸಿದ್ದಾರೆ.

ಮೊಜ್ತಬಾ ಖಮೇನಿ ಅವರನ್ನು ದೇಶದ ಹೊಸ ಸರ್ವೋಚ್ಚ ನಾಯಕರನ್ನಾಗಿ ನೇಮಕ ಇರಾನ್ ಘೋಷಣೆ ಮಾಡಿದ ಬಳಿಕ ನಡೆದ ಭಾರತ ಮತ್ತು ಇರಾನ್ ವಿದೇಶಾಂಗ ಸಚಿವರ ನಡುವಿನ ಮೊದಲ ದೂರವಾಣಿ ಸಂಭಾಷಣೆ ಇದಾಗಿದೆ.

ಅಮೆರಿಕದ ಜಲಾಂತರ್ಗಾಮಿ ನೌಕೆಯು ಮಾರ್ಚ್ 4ರಂದು ಶ್ರೀಲಂಕಾ ಕರಾವಳಿಯಲ್ಲಿ ಇರಾನ್ನ ಯುದ್ಧನೌಕೆ ‘ಐಆರ್ಐಎಸ್ ಡೆನಾ’ವನ್ನು ಮುಳುಗಿಸಿತ್ತು. ವಿಶಾಖಪಟ್ಟಣದಲ್ಲಿ ನಡೆದಿದ್ದ ‘ಮಿಲನ್ 2026’ ಹೆಸರಿನ ಸೇನಾ ಸಮರಾಭ್ಯಾಸ ಮುಗಿಸಿ ಹಿಂದಿರುಗುತ್ತಿದ್ದ ನೌಕೆಯ ಮೇಲೆ ನಡೆದ ದಾಳಿಯಲ್ಲಿ ಇರಾನ್ ನೌಕಾಪಡೆಯ 87 ಮಂದಿ ಮೃತಪಟ್ಟಿದ್ದರು. ಈ ಕುರಿತು ಜೈಶಂಕರ್–ಅರಾಘ್ಚಿ ಚರ್ಚೆ ನಡೆಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.