ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ರೂಪನಾರಾಯಣ ನದಿಯಲ್ಲಿ ದೋಣಿ ಮುಳುಗಿ ಐವರು ನಾಪತ್ತೆ

Published 9 ಫೆಬ್ರುವರಿ 2024, 4:29 IST
Last Updated 9 ಫೆಬ್ರುವರಿ 2024, 4:29 IST
ಅಕ್ಷರ ಗಾತ್ರ

ಹೌರಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ರೂಪನಾರಾಯಣ ನದಿಯಲ್ಲಿ ದೋಣಿ ಮುಳುಗಿ ಐವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೌರಾ ಜಿಲ್ಲೆಯ ಬೆಲ್ಗಾಚಿಯಾ, ಶಿಬ್‌ಪುರ ಮತ್ತು ಬಗ್ನಾನ್‌ನಿಂದ 19 ಜನರ ಗುಂಪು ಪಶ್ಚಿಮ ಮೇದಿನಿಪುರ ಜಿಲ್ಲೆಯ ದಾಸ್‌ಪುರದ ಟ್ರಿಬೇನಿ ಪಾರ್ಕ್‌ಗೆ ಪಿಕ್‌ನಿಕ್‌‌ಗೆ ತೆರಳಿತ್ತು. ಗುರುವಾರ ರಾತ್ರಿ ಮನೆಗೆ ಮರಳುತ್ತಿದ್ದ ವೇಳೆ ನದಿಯ ಮಧ್ಯದಲ್ಲಿ ದೋಣಿ ಮಗುಚಿದೆ.

ಕಿರುಚಾಟ ಕೇಳಿ ಇತರ ದೋಣಿಗಳ ಸಹಾಯದಿಂದ ಸಾಧ್ಯವಾದಷ್ಟು ಜನರನ್ನು ರಕ್ಷಿಸಲಾಗಿದೆ. ಆದರೆ ಐವರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ರಕ್ಷಣಾ ಕಾರ್ಯಕ್ಕಾಗಿ ಎರಡು ವಿಪತ್ತು ನಿರ್ವಹಣಾ ತಂಡ ಮತ್ತು ನಾಗರಿಕ ರಕ್ಷಣಾ ಸಿಬ್ಬಂದಿ ಧಾವಿಸಿದ್ದಾರೆ' ಎಂದು ಹೌರಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ದೀಪಪ್ರಿಯಾ ತಿಳಿಸಿದ್ದಾರೆ.

'ಘಟನೆಯಲ್ಲಿ ರಕ್ಷಿಸಲ್ಪಟ್ಟ ಕೆಲವರನ್ನು ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಕಳುಹಿಸಲಾಗಿದೆ. ಸದ್ಯ ರಕ್ಷಣಾ ಕಾರ್ಯ ನಡೆಯುತ್ತಿದೆ' ಎಂದು ಪೊಲೀಸ್ ವರಿಷ್ಠಾಧಿಕಾರಿ ಸ್ವಾತಿ ಭಂಗಾಲಿಯಾ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT