ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ಇಂದು (ಏ.29) ನಡೆಯಲಿದೆ. ರಾಜ್ಯದ 142 ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹಲವು ಸಚಿವರು ಸೇರಿದಂತೆ ಕಣದಲ್ಲಿರುವ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ. 41,001 ಮತಗಟ್ಟೆಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.

ಏಪ್ರಿಲ್ 23ರಂದು ನಡೆದ ಮೊದಲ ಹಂತದ ಮತದಾನದಲ್ಲಿ ರಾಜ್ಯದಲ್ಲಿ ಶೇ 93.19ರಷ್ಟು ಮತದಾನವಾಗಿತ್ತು. ಎರಡೂ ಹಂತಗಳ ಚುನಾವಣೆಯ ಫಲಿತಾಂಶವು ಮೇ 4ರಂದು ಘೋಷಣೆಯಾಗಲಿದೆ. ರಾಜ್ಯದಲ್ಲಿ ಬಹಿರಂಗ ಪ್ರಚಾರವು ಸೋಮವಾರ ಅಂತ್ಯಗೊಂಡಿದೆ.

ಚುನಾವಣೆ ಮುಗಿಯುವವರೆಗೂ ಆದೇಶ ಇಲ್ಲ: ಹೈಕೋರ್ಟ್

ಚುನಾವಣಾ ಕರ್ತವ್ಯದಲ್ಲಿರುವ ಯಾವುದೇ ಅಧಿಕಾರಿಗೆ ಸಂಬಂಧಿಸಿದಂತೆ ಏಪ್ರಿಲ್ 29ರವರೆಗೆ ಆದೇಶ ನೀಡುವುದಿಲ್ಲ ಎಂದು ಕಲ್ಕತ್ತ ಹೈಕೋರ್ಟ್ ಮಂಗಳವಾರ ತಿಳಿಸಿದೆ. ಐಪಿಎಸ್ ಅಧಿಕಾರಿ ಅಜಯ್ ಪಾಲ್ ಶರ್ಮಾ ಅವರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಹೀಗಾಗಿ ಚುನಾವಣಾ ಕರ್ತವ್ಯದಲ್ಲಿ ಭಾಗಿಯಾಗದಂತೆ ನಿರ್ಬಂಧ ಹೇರಬೇಕು ಎಂದು ವಕೀಲರು ನ್ಯಾಯಮೂರ್ತಿ ಕೃಷ್ಣ ರಾವ್ ಅವರಿಗೆ ಮನವಿ ಮಾಡಿದರು. ಈ ವೇಳೆ ನ್ಯಾಯಮೂರ್ತಿ ಕೃಷ್ಣ ರಾವ್ ಅವರು ‘ಏಪ್ರಿಲ್ 29ರವರೆಗೆ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಆದೇಶವನ್ನು ಹೊರಡಿಸುವುದಿಲ್ಲ’ ಎಂದು ಹೇಳಿದರು. ದಕ್ಷಿಣ ಪರಗಣ 24 ಜಿಲ್ಲೆಯ ಪೊಲೀಸ್ ವೀಕ್ಷಕರಾಗಿ ಅಜಯ್ ಪಾಲ್ ಅವರನ್ನು ನೇಮಕ ಮಾಡಲಾಗಿದೆ.

1468 ಹೆಸರು ಮತದಾರರ ಪಟ್ಟಿಗೆ ಸೇರ್ಪಡೆ

ಎಸ್ಐಆರ್ಗೆ ಸಂಬಂಧಿಸಿದ ನ್ಯಾಯಮಂಡಳಿಯ ಆದೇಶದ ಬಳಿಕ ಪಶ್ಚಿಮ ಬಂಗಾಳದಲ್ಲಿ 1468 ಜನರ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಇವರು ಎರಡನೇ ಹಂತದ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡಬಹುದು ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೇಲ್ಮನವಿ ನ್ಯಾಯಮಂಡಳಿಯು ಏಪ್ರಿಲ್ 27ರವರೆಗೆ ವಿಲೇವಾರಿ ಮಾಡಿರುವ ಅರ್ಜಿಗಳ ಪೈಕಿ ಅರ್ಹ ಮತದಾರರ ಹೆಸರನ್ನು ಪೂರಕ ಪಟ್ಟಿಗೆ ಸೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪೂರಕ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ವೆಬ್ಸೈಟ್ನಲ್ಲಿ ತಮ್ಮ ಎಪಿಕ್ ನಂಬರ್ ನಮೂದಿಸಿ ವಿವರವನ್ನು ಪಡೆಯಬಹುದು ಎಂದು ಆಯೋಗ ತಿಳಿಸಿದೆ.

ಒಟ್ಟು ಮತದಾರರು; 3.21 ಕೋಟಿ

ಪುರುಷರು; 1.64 ಕೋಟಿ

ಮಹಿಳೆಯರು; 1.57 ಕೋಟಿ

ಲಿಂಗತ್ವ ಅಲ್ಪಸಂಖ್ಯಾತರು; 792

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.