ಕೋಲ್ಕತ್ತ (ಪಿಟಿಐ): ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ ಪ್ರಕರಣದಲ್ಲಿ ವೃತ್ತಿಪರ ಶೂಟರ್ಗಳು ಭಾಗಿಯಾಗಿರುವ ಬಗ್ಗೆ ತನಿಖಾಧಿಕಾರಿಗಳು ಶಂಕೆ ವ್ಯಕ್ತಪಡಿಸಿರುವುದರಿಂದ ಪಶ್ಚಿಮ ಬಂಗಾಳದ ಗಡಿ ಜಿಲ್ಲೆಗಳಲ್ಲಿ ಪೊಲೀಸರ ಕಣ್ಗಾವಲು ಹಾಗೂ ಶೋಧ ಕಾರ್ಯವನ್ನು ಹೆಚ್ಚಿಸಲಾಗಿದೆ.

ದುಷ್ಕರ್ಮಿಗಳಿಗೆ ನೆರವು ನೀಡಿದ್ದಾರೆ ಎನ್ನಲಾದ ಸ್ಥಳೀಯ ಕಿಡಿಗೇಡಿಗಳ ಪಾತ್ರದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನಾ ಸ್ಥಳದ ಸುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಶೋಧ ಕೈಗೊಳ್ಳಲಾಗಿದ್ದು, ಜೆಸ್ಸೋರ್ ರಸ್ತೆಯಲ್ಲಿರುವ ಎಲ್ಲ ಸಿ.ಸಿ.ಟಿ.ವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುವ ಕಾರ್ಯ ನಡೆದಿದೆ.

‘ಪ್ರಕರಣದ ಬಗ್ಗೆ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ. ಈ ದಾಳಿಯ ವಿಧಾನವನ್ನು ಗಮನಿಸಿದರೆ ದೀರ್ಘಕಾಲದವರೆಗೆ ಸಂಚು ನಡೆಸಿರುವುದು ಹಾಗೂ ರಾಜ್ಯದ ಹೊರಗಿನ ಸುಪಾರಿ ಹಂತಕರ ಕೈವಾಡವಿರುವ ಸಾಧ್ಯತೆಯನ್ನು ಸೂಚಿಸುತ್ತದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಬಂದೂಕುಧಾರಿಗಳು ದಾಳಿ ನಡೆಸುವ ಮುನ್ನ ರಥ್ ಅವರ ವಾಹನವನ್ನು ಹಿಂಬಾಲಿಸಿದ್ದಾರೆ. ದುಷ್ಕರ್ಮಿಗಳು ಪರಾರಿಯಾದ ಮಾರ್ಗವನ್ನು ಗಮನಿಸಿದರೆ, ಅವರಿಗೆ ಆ ಪ್ರದೇಶದ ಪರಿಚಯವಿತ್ತು ಅಥವಾ ಸ್ಥಳೀಯರು ಅವರಿಗೆ ಸಹಾಯ ಮಾಡಿರುವ ಸಾಧ್ಯತೆ ಇದೆ. ಸ್ಥಳೀಯರ ಬೆಂಬಲವಿಲ್ಲದೆ, ಅಷ್ಟು ವೇಗವಾಗಿ ಗಲ್ಲಿಗಳ ಮೂಲಕ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ’ ಎಂದು ಹೇಳಿದ್ದಾರೆ.

‘ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್ ಅನ್ನು 2012ರಲ್ಲಿ ಅಸನ್ಸೋಲ್ನ ಬರ್ನ್ಪುರ ನಿವಾಸಿಯೊಬ್ಬರ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಆದರೆ, ವಾಹನ ನೋಂದಣಿ ವೇಳೆ ನೀಡಿರುವ ವಿಳಾಸದಲ್ಲಿ ಪ್ರಸ್ತುತ ಆ ಹೆಸರಿನ ಯಾವುದೇ ವ್ಯಕ್ತಿ ವಾಸಿಸುತ್ತಿಲ್ಲ’ ಎಂದು ಮಾಹಿತಿ ನೀಡಿದ್ದಾರೆ.

ಬುಧವಾರ ರಾತ್ರಿ ಕೊಲೆ ನಡೆದಾಗಿನಿಂದ ಆ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಪೊಲೀಸ್ ಮತ್ತು ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-51-1354994604

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.