ಕೋಲ್ಕತ್ತ: ಪಶ್ಚಿಮ ಬಂಗಾಳದ ಪೂರ್ವ ವರ್ಧಮಾನ್ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ.

ಕಟ್ವಾ ಉಪ ವಿಭಾಗದ ರಾಜೋವಾ ಗ್ರಾಮದಲ್ಲಿ ಬೆಳಿಗ್ಗೆ 8.30ರ ಸುಮಾರಿಗೆ ಘಟನೆ ನಡೆದಿದ್ದು, ಸ್ಫೋಟದ ತೀವ್ರತೆಗೆ ಬಾಂಬ್ ತಯಾರಿಸುತ್ತಿದ್ದ ಮನೆಯ ಛಾವಣಿಯೇ ಹಾರಿಹೋಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಸತತ ಎರಡು ಬಾರಿ ಸ್ಫೋಟ ಸಂಭವಿಸಿದ್ದು, ಸುತ್ತಲಿನ ಪ್ರದೇಶ ನಡುಗಿದೆ ಎಂದು ಸ್ಥಳೀಯರೊಬ್ಬರು ತಿಳಿಸಿದರು.

ಮನೆಯೊಳಗೆ ಸುಟ್ಟು ಕರಕಲಾದ ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತುಫಾನ್ ಚೌಧುರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳೀಯ ದೇಶವಿರೋಧಿಗಳು ಮನೆಯೊಳಗೆ ಬಾಂಬ್ ತಯಾರಿಸಲು ದುಷ್ಕರ್ಮಿಗಳ ಗುಂಪನ್ನು ಕರೆಸಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಮನೆಯನ್ನು ಬಾಂಬ್ ತಯಾರಿಸಲು ಬಳಸಲಾಗುತ್ತಿತೇ ಅಥವಾ ಇತರ ಚಟುವಟಿಕೆಗಳಿಗೆ ಬಳಸಲಾಗುತ್ತಿತೇ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.