ನಂದಿಗ್ರಾಮ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಠಾಕೂರ್ ಚೌಕ್‌ನಲ್ಲಿ ಸೋಮವಾರ ಪಾದಯಾತ್ರೆ ನಡೆಸಿದ್ದಾರೆ.

ಗಾಲಿ ಕುರ್ಚಿಯಲ್ಲಿ ಕುಳಿತುಕೊಂಡು ಬೆಂಬಲಿಗರ ಜತೆ ಮಮತಾ ಪಾದಯಾತ್ರೆಯಲ್ಲಿ ಭಾಗವಹಿಸಿದ ವಿಡಿಯೊವನ್ನು ‘ಎಎನ್‌ಐ’ ಟ್ವೀಟ್ ಮಾಡಿದೆ.

ಮಾರ್ಚ್ 10ರಂದು ನಾಮಪತ್ರ ಸಲ್ಲಿಸಿ ಹಿಂತಿರುಗುವ ಸಂದರ್ಭ ಅಪರಿಚಿತರು ತಳ್ಳಿದ್ದರಿಂದ ಮಮತಾ ಕಾಲಿಗೆ ಗಾಯವಾಗಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಅವರು ಬಳಿಕ ಬಿಡುಗಡೆಯಾಗಿದ್ದರು.

ಓದಿ:ತಳ್ಳಿದ ಅಪರಿಚಿತರು: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲಗಾಲಿಗೆ ಗಾಯ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಏಪ್ರಿಲ್ 1ರಂದು ನಡೆಯಲಿದೆ. ಇದರಲ್ಲಿ ನಂದಿಗ್ರಾಮ ಕ್ಷೇತ್ರವೂ ಸೇರಿದೆ. ಟಿಎಂಸಿ ತೊರೆದು ಬಿಜೆಪಿ ಸೇರಿ ಆ ಪಕ್ಷದಿಂದ ಕಣಕ್ಕಿಳಿದಿರುವ ಸುವೇಂದು ಅಧಿಕಾರಿ ಅವರು ನಂದಿಗ್ರಾಮದಲ್ಲಿ ಮಮತಾ ಪ್ರತಿಸ್ಪರ್ಧಿಯಾಗಿದ್ದಾರೆ. ಸುವೇಂದು ಅಧಿಕಾರಿ ಅವರ ಹಾಲಿ ಕ್ಷೇತ್ರವೂ ಆಗಿದೆ ನಂದಿಗ್ರಾಮ. ಹೀಗಾಗಿ ಎರಡೂ ಪಕ್ಷಗಳಿಗೆ ಇದು ಪ್ರತಿಷ್ಠೆಯ ಕಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.