ಕೋಲ್ಕತ್ತ: ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಸಲಹೆಗಾರರಾಗಿ, ಮಾಜಿ ಐಎಎಸ್ ಅಧಿಕಾರಿ ಸುಬ್ರತಾ ಗುಪ್ತಾ ಅವರನ್ನು ಶನಿವಾರ(ಮೇ 9) ನೇಮಕ ಮಾಡಲಾಗಿದೆ.

1990ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಸುಬ್ರತಾ ಗುಪ್ತಾ ಅವರನ್ನು, ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ನ ಚುನಾವಣಾ ಆಯೋಗವು ಎಸ್ಐಆರ್ ವಿಶೇಷ ವೀಕ್ಷಕರನ್ನಾಗಿ ನೇಮಕ ಮಾಡಿತ್ತು.

ಸುಬ್ರತಾ ಗುಪ್ತಾ ಅವರ ಅಪಾರ ಅನುಭವವು ಹೊಸ ಸರ್ಕಾರದಲ್ಲಿನ ಆಡಳಿತದ ನೀತಿ, ನಿಯಮಗಳು ಮತ್ತು ಆಡಳಿತ ಸಂಬಂಧಿತ ವಿಷಯಗಳಲ್ಲಿ ಸಹಾಯ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐಎಎಸ್ ಅಧಿಕಾರಿ ಶಂತನು ಬಾಲ ಅವರನ್ನು ಮುಖ್ಯಮಂತ್ರಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಶಂತನು ಬಾಲ ಅವರು 2017ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದಾರೆ. ದಕ್ಷಿಣ 24 ಪರಗಣ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅವರು ಕಾರ್ಯನಿರ್ವಹಿಸಿದ್ದರು.

ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಬದಲಾವಣೆಯ ನಂತರ, ಸಿಎಂ ಕಚೇರಿಯ ಪುನರ್ರಚನೆ ಮಾಡುವ ಉದ್ದೇಶದಿಂದ ಶಂತನು ಬಾಲ ಅವರನ್ನು ನೇಮಕ ಮಾಡಲಾಗಿದೆ ಎಂದು ಹೇಳಿದ್ದಾರೆ.

ತಕ್ಷಣದಿಂದಲೇ ಜಾರಿಗೆ ಬರುವಂತೆ ಇಬ್ಬರನ್ನೂ ನೇಮಕ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.