ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ಅಂಗನವಾಡಿ, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಿಸಿದ ಮಮತಾ ಸರ್ಕಾರ

Published 6 ಮಾರ್ಚ್ 2024, 9:34 IST
Last Updated 6 ಮಾರ್ಚ್ 2024, 9:34 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ವೇತನವನ್ನು ₹8,250ರಿಂದ ₹9,000ಕ್ಕೆ ಹೆಚ್ಚಳ ಮಾಡಲಾಗಿದೆ. ಅದೇ ರೀತಿ ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ₹6,000ದಿಂದ ₹6,500ಕ್ಕೆ ಏರಿಕೆ ಮಾಡಲಾಗಿದ್ದು, ಏಪ್ರಿಲ್ 1ರಿಂದ ಪರಿಷ್ಕೃತ ವೇತನ ಜಾರಿಗೆ ಬರಲಿದೆ ಎಂದು ಬ್ಯಾನರ್ಜಿ ಹೇಳಿದ್ದಾರೆ.

ಕೋಲ್ಕತ್ತದಲ್ಲಿ ದೇಶದ ಮೊದಲ ನೀರೊಳಗಿನ ಮೆಟ್ರೊ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಟಿಎಂಸಿ ಸರ್ಕಾರದಿಂದ ವೇತನ ಏರಿಕೆ ಆದೇಶವೂ ಹೊರಬಿದ್ದಿದೆ.

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ವೇತನ ಏರಿಕೆ ಮಾಡಿರುವುದು ಟಿಎಂಸಿ ಸರ್ಕಾರ ವರವಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT