ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಲಿಕಾಪ್ಟರ್ ಹತ್ತುವಾಗ ಕಾಲುಜಾರಿ ಬಿದ್ದ CM ಮಮತಾ ಬ್ಯಾನರ್ಜಿಗೆ ಗಾಯ

Published 27 ಏಪ್ರಿಲ್ 2024, 9:27 IST
Last Updated 27 ಏಪ್ರಿಲ್ 2024, 9:27 IST
ಅಕ್ಷರ ಗಾತ್ರ

ದುರ್ಗಾಪುರ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದಿರುವ ಘಟನೆ ವರ್ಧಮಾನ್‌ನ ದುರ್ಗಾಪುರದಲ್ಲಿ ನಡೆದಿದೆ. ಈ ವಿಡಿಯೊವನ್ನು ಎಎನ್ಐ ಸುದ್ದಿಸಂಸ್ಥೆ ಎಕ್ಸ್‌ನಲ್ಲಿ ಹಂಚಿಕೊಂಡಿದೆ.

ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತಿ ಸೀಟ್​​​ನಲ್ಲಿ ಕುಳಿತುಕೊಳ್ಳಲು ಹೋದಾಗ ಅವರು ಕಾಲು ಜಾರಿ ಬಿದ್ದಿದ್ದಾರೆ. ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ. ತಕ್ಷಣ ರಕ್ಷಣಾ ಸಿಬ್ಬಂದಿ ಅವರ ಬಳಿ ಧಾವಿಸಿದ್ದಾರೆ. ಬಳಿಕ ಸಿಎಂ ಮಮತಾ ಬ್ಯಾನರ್ಜಿ ‌ಅಸನ್ಸೋಲ್‌ಗೆ ಪ್ರಯಾಣ ಬೆಳೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT