ಕೋಲ್ಕತ್ತಾ: ನಿನ್ನೆ ಪಶ್ಚಿಮ ಬಂಗಾಳದ ನಂದಿಗ್ರಾಮ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಬಳಿಕ ತಳ್ಳಾಟದಲ್ಲಿ ಗಾಯಗೊಂಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಕೋಲ್ಕತ್ತಾದ ಎಸ್ಎಸ್ಕೆಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಆ್ಯಂಬುಲೆನ್ಸ್ ಮೂಲಕ ಕರೆತಂದು ಸ್ಟ್ರೆಚರ್ನಲ್ಲಿ ಆಸ್ಪತ್ರೆ ಒಳಗೆ ಕರೆದೊಯ್ಯಲಾಯಿತು. ಈ ಮಧ್ಯೆ, ಆಸ್ಪತ್ರೆಗೆ ಭೇಟಿ ನೀಡಿದ ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಮಮತಾ ಅವರಿಗೆ ಗಂಭೀರ ಗಾಯಗಳಾಗಿದ್ದು, ವೈದ್ಯಕೀಯ ವರದಿಗಾಗಿ ಕಾಯುತ್ತಿರುವುದಾಗಿ ಹೇಳಿದ್ದಾರೆ.