ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ. ಬಂಗಾಳದಲ್ಲಿ ಹೆಚ್ಚುತ್ತಿರುವ ಡೆಂಗಿ: ಸೊಳ್ಳೆ ನಿಯಂತ್ರಣಕ್ಕೆ ಡ್ರೋನ್‌ ಬಳಕೆ

Published 26 ಸೆಪ್ಟೆಂಬರ್ 2023, 11:31 IST
Last Updated 26 ಸೆಪ್ಟೆಂಬರ್ 2023, 11:31 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನಗರದಲ್ಲಿ ಡ್ರೋನ್‌ ಬಳಸಿ ಸೊಳ್ಳೆಗಳು ಉತ್ಪತ್ತಿಯಾಗುವ ಜಾಗಗಳಲ್ಲಿ ರಾಸಯನಿಕಗಳನ್ನು ಸಿಂಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುನ್ಸಿಪಲ್ ಕಾರ್ಪೊರೇಶನ್ ಮತ್ತು ರಾಜ್ಯ ಅಗತ್ಯ ವಸ್ತುಗಳ ಸರಬರಾಜು ನಿಗಮ ಜಂಟಿಯಾಗಿ ಡ್ರೋನ್‌ ಬಳಸಿ ಸೊಳ್ಳೆಗಳು ಉತ್ಪತ್ತಿಯಾಗುವ ಜಾಗಗಳಲ್ಲಿ ರಾಸಯನಿಕಗಳನ್ನು ಸಿಂಪಡಿಸಲಾಗುತ್ತಿರುವ ವಿಡಿಯೊವನ್ನು ಸುದ್ದಿಸಂಸ್ಥೆ ಎಎನ್‌ಐ ಹಂಚಿಕೊಂಡಿದೆ.

ಡೆಂಗಿ ಪ್ರಕರಣಗಳನ್ನು ಪರಿಹರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ ಡೆಂಗಿ ಪ್ರಕರಣಗಳನ್ನು ನಿಯಂತ್ರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಿದೆ ಎಂದು ಟಿಎಂಸಿ ನಾಯಕ ಕುನಾಲ್ ಘೋಷ್ ಮಂಗಳವಾರ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಮೆಟ್ರೊ, ನಿರ್ಮಾಣ ಹಂತದಲ್ಲಿರುವ ಕಟ್ಟಡಗಳು, ಸಾರ್ವಜನಿಕ ಸ್ಥಳಗಳು ಸೇರಿದಂತೆ ಡೆಂಗಿ ಹರಡುವ ಪ್ರಮುಖ ಸ್ಥಳಗಳಲ್ಲಿ ತಕ್ಷಣವೇ ಸ್ವ‌ಚ್ಛತಾ ಕಾರ್ಯವನ್ನು ಕೈಗೊಳ್ಳಿ ಎಂದು ರಾಜ್ಯ ಸರ್ಕಾರ ಸೋಮವಾರ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ವರ್ಷ ಪಶ್ಚಿಮ ಬಂಗಾಳದಲ್ಲಿ ಡೆಂಗಿ ಪ್ರಕರಣಗಳ ಪೈಕಿ 30 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT