ಕೋಲ್ಕತ್ತ: ಬಹುಕೋಟಿ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

'ಪ್ರಕರಣ ಸಂಬಂಧ ಟಿಎಂಸಿಯ ದೆಗಂಗಾ ಬ್ಲಾಕ್ ಅಧ್ಯಕ್ಷ ಅನಿಸುರ್ ರೆಹಮಾನ್ ಮತ್ತು ಆತನ ಸಹೋದರನನ್ನು ಬಂಧಿಸಲಾಗಿದೆ. ವೈದ್ಯಕೀಯ ಪರೀಕ್ಷೆಯ ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುತ್ತೇವೆ‘ ಎಂದು ಅಧಿಕಾರಿಯೊಬ್ಬರು ‘ಪಿಟಿಐ’ಗೆ ತಿಳಿಸಿದ್ದಾರೆ.

ಗುರುವಾರ ತಡರಾತ್ರಿ ಅನಿಸುರ್ ರೆಹಮಾನ್ ಮತ್ತು ಆತನ ಸಹೋದರನಿಗೆ ಸೇರಿದ ಹತ್ತು ಸ್ಥಳಗಳಲ್ಲಿ ಮತ್ತು ಹಲವು ಉದ್ಯಮಿಗಳಿಗೆ ಸೇರಿದ ಮನೆಗಳು, ಅಕ್ಕಿ ಗಿರಣಿಗಳು ಹಾಗೂ ಕಚೇರಿಗಳ ಮೇಲೆ ಇ.ಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಬಳಿಕ ರೆಹಮಾನ್ ಮತ್ತು ಆತನ ಸಹೋದರನನ್ನು ಸತತ 14 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಗಿತ್ತು.

ಈ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ರಾಜ್ಯದ ಅರಣ್ಯ ಸಚಿವ ಜ್ಯೋತಿಪ್ರಿಯೊ ಮಲ್ಲಿಕ್ ಅವರನ್ನು ಇ.ಡಿ ಈಗಾಗಲೇ ಬಂಧಿಸಿದೆ. ಜ್ಯೋತಿಪ್ರಿಯೊ ಅವರು ಆಹಾರ ಸಚಿವರಾಗಿದ್ದ ಅವಧಿಯಲ್ಲಿ ಬಹುಕೋಟಿಯ ಪಡಿತರ ಹಗರಣ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.