ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನಲ್ಲೂ ಉತ್ಸಾಹ ಇಮ್ಮಡಿಗೊಂಡಿದೆ. ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಗೆಲುವು ನಿಶ್ಚಿತ. ರಾಜ್ಯದಲ್ಲಿ ಬದಲಾವಣೆ ತರುತ್ತೇವೆ
ಸುವೇಂದು ಅಧಿಕಾರಿ ವಿಧಾನಸಭೆ ವಿಪಕ್ಷ ನಾಯಕ
ಶಾ ನೀಡಿದ ಸೂಚನೆಗಳು
ಘೋಷ್ ಮುಖ್ಯ ಏಕೆ?
ದಿಲೀಪ್ ಘೋಷ್ ಅವರು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥರಾಗಿದ್ದ ವೇಳೆ 2019ರಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿತ್ತು. ಆಗ ಬಿಜೆಪಿ ಮೂರು ಶಾಸಕರನ್ನು ಹೊಂದಿತ್ತು. ಆ ಚುನಾವಣೆಯಲ್ಲಿ 70 ಸ್ಥಾನಗಳಲ್ಲಿ ಗೆದ್ದಿತ್ತು. 18 ಲೋಕಸಭಾ ಕ್ಷೇತ್ರಗಳಲ್ಲಿ ಗೆದ್ದು ಬೀಗಿತ್ತು. ಹೀಗಾಗಿ ಘೋಷ್ ಅವರನ್ನು ರಾಜ್ಯ ಘಟಕದ ಬಹು ಯಶಸ್ವಿ ಅಧ್ಯಕ್ಷ ಎಂದೇ ಪರಿಗಣಿಸಲಾಗುತ್ತಿತ್ತು. ಆದರೆ ಈ ವರ್ಷದ ಆರಂಭದಲ್ಲಿ ದಿಘಾ ಪಟ್ಟಣದಲ್ಲಿ ನಡೆದ ಜಗನ್ನಾಥ ದೇವಸ್ಥಾನ ಉದ್ಘಾಟನೆ ಸಮಾರಂಭದಲ್ಲಿ ಘೋಷ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು. ಈ ದೃಶ್ಯಗಳು ಸುದ್ದಿವಾಹಿನಿಗಳಲ್ಲಿ ವ್ಯಾಪಕವಾಗಿ ಬಿತ್ತರಗೊಂಡಿದ್ದವು. ಅಂದಿನಿಂದ ಘೋಷ್ ಅವರನ್ನು ಬಿಜೆಪಿಯಲ್ಲಿ ನಿರ್ಲಕ್ಷಿಸಲಾಗಿತ್ತು ಎನ್ನಲಾಗುತ್ತಿದೆ. ಈಗ ಅವರ ಕುರಿತ ಅಸಮಾಧಾನ ಶಮನಗೊಂಡಿದ್ದು ಈಗ ಮುಂಬರುವ ಚುನಾವಣೆಯಲ್ಲಿ ಅವರಿಗೆ ಪಕ್ಷವನ್ನು ಗೆಲುವಿನ ದಡ ಮುಟ್ಟಿಸುವ ಮಹತ್ತರ ಜವಾಬ್ದಾರಿ ನೀಡುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.