ಕೋಲ್ಕತ್ತ: ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭೆಗೆ ಇಂದು(ಗುರುವಾರ) ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಈ ಉಪ ಚುನಾವಣೆಯು ತೀವ್ರ ಮಹತ್ವ ಪಡೆದುಕೊಂಡಿದೆ.

ಇದೇ ವೇಳೆ ಟಿಎಂಸಿ ಶಾಸಕ ಮದನ್ ಮಿತ್ರ ಅವರು ಮತಗಟ್ಟೆಯೊಂದನ್ನು ವಶಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಆರೋಪಿಸಿದ್ದಾರೆ.

ಸುದ್ದಿಸಂಸ್ಥೆ ಎಎನ್‌ಐನೊಂದಿಗೆ ಮಾತನಾಡಿರುವ ಅವರು, 'ಟಿಎಂಸಿ ಶಾಸಕ ಮದನ್ ಮಿತ್ರ ಅವರು ಮತಗಟ್ಟೆಯನ್ನು (ವಾರ್ಡ್ 72) ವಶಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ಮತಯಂತ್ರವನ್ನು ಸ್ಥಗಿತಗೊಳಿಸಲಾಗಿದೆ' ಎಂದು ಟಿಬ್ರೆವಾಲ್ ಹೇಳಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಅವರು ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ಆ ಹಿನ್ನೆಲೆಯಲ್ಲಿ ಮಮತಾ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಭವಾನಿಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.

2011 ಮತ್ತು 2016ರ ವಿಧಾನಸಭೆ ಚುನಾವಣೆಗಳಲ್ಲಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಗೆಲುವು ಸಾಧಿಸಿದ್ದರು. ಸೆ.30ರಂದು ನಡೆಯುತ್ತಿರುವ ಉಪಚುನಾವಣೆಯಲ್ಲಿ ಮಮತಾ ವಿರುದ್ಧ ಅಭ್ಯರ್ಥಿಯನ್ನು ಹಾಕದಿರಲು ಕಾಂಗ್ರೆಸ್ ನಿರ್ಧರಿಸಿದೆ. ಅಕ್ಟೋಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.