ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Exit Poll: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅಧಿಕಾರಕ್ಕೆ, ಬಿಜೆಪಿ ಪ್ರಬಲ ಪೈಪೋಟಿ

Last Updated 30 ಏಪ್ರಿಲ್ 2021, 9:52 IST
ಅಕ್ಷರ ಗಾತ್ರ

ನವದೆಹಲಿ: 4 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆ ಮುಗಿದಿದ್ದು, ಇದೀಗ ಸೋಲು ಗೆಲುವಿನ ಲೆಕ್ಕಾಚಾರ ಶುರುವಾಗಿದೆ.

ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಟೈಮ್ಸ್ ನೌ ಮತ್ತು ಸಿವೋಟರ್ ಚುನಾವಣೋತ್ತರ ಸಮೀಕ್ಷೆ ಹೇಳಿದೆ.

292 ಕ್ಷೇತ್ರಗಳ ಪೈಕಿ ಟಿಎಂಸಿ 158 ಕ್ಷೇತ್ರಗಳನ್ನು ಗೆಲ್ಲಬಹುದು. ಆದರೆ,2016ರಲ್ಲಿ 211 ಸ್ಥಾನಗೆದ್ದಿದ್ದ ಟಿಎಂಸಿ ಈ ಬಾರಿ 53 ಸ್ಥಾನ ಕಳೆದುಕೊಳ್ಳುವಸಾಧ್ಯತೆ ಇದೆ. ಈ ಬಾರಿ ಪ್ರಬಲ ಪೈಪೋಟಿ ಒಡ್ಡಿರುವ ಬಿಜೆಪಿ 115 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಸಮೀಕ್ಷೆ ತಿಳಿಸಿದೆ. 2016 ರ ಚುನಾವಣೆಯಲ್ಲಿ ಬಿಜೆಪಿ ಕೇವಲ ಮೂರು ಸ್ಥಾನಗಳನ್ನು ಗೆದ್ದಿತ್ತು.

ಎಬಿಪಿ–ಸಿವೋಟರ್ ಸಮೀಕ್ಷೆಯೂ ಸಹ ಟಿಎಂಸಿ 152–164 ಸ್ಥಾನ ಗೆಲ್ಲುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಬಿಜೆಪಿ 109–121ಮತ್ತು ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳು 14–25 ಸ್ಥಾನ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಿದೆ.

ಇಟಿಜಿ ರಿಸರ್ಚ್ ಸಮೀಕ್ಷೆ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ 164–176 ಕ್ಷೇತ್ರಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ. ಪ್ರಬಲ ಎದುರಾಳಿ ಬಿಜೆಪಿ 105–115 ಮತ್ತು ಇತರರಯ 10–15 ಸ್ಥಾನ ಗೆಲ್ಲಬಹುದು ಎಂದಿದೆ.

ಇನ್ನು, ಪಿ–ಮಾರ್ಕ್ ಸಮೀಕ್ಷೆಯೂ ಸಹ ಟಿಎಂಸಿ ಮತ್ತೆ ಅಧಿಕರದ ಗದ್ದುಗೆ ಏರಲಿದೆ ಎಮದು ಭವಿಷ್ಯ ನುಡಿದಿದೆ. ಟಿಎಂಸಿ 152–172, ಬಿಜೆಪಿ 112–132 ಕ್ಷೇತ್ರ ಗೆಲ್ಲಲಿದೆ ಎಂದು ಹೇಳಿದೆ.

ರಿಪಬ್ಲಿಕ್ ಟಿವಿ ಸಮೀಕ್ಷೆ ಮಾತ್ರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 138–148 ಸ್ಥಾನ ಗೆದ್ದು, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಿದೆ. ಟಿಎಂಸಿ 128–138 ಸ್ಥಾನ ಗೆಲ್ಲಿದೆ. ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು 11–21 ಸ್ಥಾನ ಗೆಲ್ಲುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT