ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ಮಮತಾಗೆ ಕರೆ ಮಾಡಿದ ಪ್ರಧಾನಿ, ಪ್ರವಾಹ ಪರಿಸ್ಥಿತಿಯ ಅವಲೋಕನ

Last Updated 4 ಆಗಸ್ಟ್ 2021, 9:27 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಭರವಸೆ ನೀಡಿದ್ದಾರೆ.

ಬುಧವಾರ ಬೆಳಿಗ್ಗೆ ಮಮತಾ ಬ್ಯಾನರ್ಜಿ ಅವರಿಗೆ ಕರೆ ಮಾಡಿದ ಪ್ರಧಾನಿ, ರಾಜ್ಯದ ವಿವಿಧ ಜಲಾಶಯಗಳಿಂದ ನೀರು ಹೊರಬಿಟ್ಟ ನಂತರ, ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಚರ್ಚಿಸಿದರು ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್‌ ಮಾಡಿದೆ.

ಹೌರಾ ಜಿಲ್ಲೆಯ ಪ್ರವಾಹ ಪೀಡಿತ ಉದಯನಾರಾಯಣಪುರಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಅಲ್ಲಿನ ಪ್ರವಾಹ ಪರಿಸ್ಥಿತಿ ಮತ್ತು ಅದರಿಂದ ಉಂಟಾದ ಹಾನಿಯ ಬಗ್ಗೆ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ವಿವರವಾದ ವರದಿಯನ್ನು ಸಲ್ಲಿಸುವುದಾಗಿ ಪ್ರಧಾನಿಗೆ ಹೇಳಿದ್ದಾರೆಂದು ತಿಳಿದುಬಂದಿದೆ.

ದಾಮೋದರ್ ವ್ಯಾಲಿ ಕಾರ್ಪೊರೇಷನ್ ಮತ್ತು ದುರ್ಗಾಪುರ ಬ್ಯಾರೇಜ್ ನಿಂದ ನೀರು ಹೊರಬಿಟ್ಟಿರುವ ಕಾರಣದಿಂದಾಗಿ ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಸುಮಾರು 3 ಲಕ್ಷ ಜನರು ಸ್ಥಳಾಂತರಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT