ದೀಘಾ: ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ದಿಘಾದಲ್ಲಿ ₹100 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಜಗನ್ನಾಥ ದೇವಾಲಯದ ನಿರ್ಮಾಣ ಕಾರ್ಯವು 2023ರ ಡಿಸೆಂಬರ್‌ಗೆ ಪೂರ್ಣವಾಗಲಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.

ಇಲ್ಲಿಯ ಕರಾವಳಿ ತೀರದಲ್ಲಿ 20 ಎಕರೆ ಪ್ರದೇಶದಲ್ಲಿ ಈ ದೇವಸ್ಥಾನವನ್ನು ನಿರ್ಮಿಸಲಾಗುತ್ತಿದೆ. ಪಶ್ಚಿಮ ಬಂಗಾಳ ವಸತಿ ಮೂಲಸೌಕರ್ಯ ಅಭಿವೃದ್ಧಿ ನಿಗಮವು(ಡಬ್ಲ್ಯುಬಿಎಚ್‌ಐಡಿಸಿಒ) ನಿರ್ಮಾಣದ ಜವಾಬ್ದಾರಿ ಹೊತ್ತಿದೆ. ಒಡಿಶಾದ ಪುರಿ ಜಗನ್ನಾಥ ದೇವಾಲಯದ ಮಾದರಿಯಲ್ಲೇ ಈ ದೇವಸ್ಥಾನವನ್ನು ನಿರ್ಮಿಸಲಾಗುತ್ತಿದೆ. 65 ಮೀಟರ್ ಎತ್ತರದ ಈ ದೇವಾಲಯದಲ್ಲಿ ಜಗನ್ನಾಥ, ಬಲಭದ್ರ ಮತ್ತು ಸುಭದ್ರಾ ದೇವತೆಗಳ ಮೂರ್ತಿ ಇರಲಿದೆ ಎಂದುಡಬ್ಲ್ಯುಬಿಎಚ್‌ಐಡಿಸಿಒ ಮುಖ್ಯ ಎಂಜಿನಿಯರ್ ಸುಮನ್ ನಿಯೋಗಿ ತಿಳಿಸಿದ್ದಾರೆ.

ನಿರ್ಮಾಣ ಕೆಲಸ ಪೂರ್ಣವಾದ ಬಳಿಕ ದೀಘಾ ಶಂಕರಪುರ ಅಭಿವೃದ್ಧಿ ಪ್ರಾಧಿಕಾರವು ದೇವಸ್ಥಾನದ ವ್ಯವಹಾರಗಳನ್ನು ನೋಡಿಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

‘ಪುರಿ ಜಗನ್ನಾಥ ದೇವಸ್ಥಾನವನ್ನೇ ಹೋಲುವ ದೇವಸ್ಥಾನವನ್ನು ಪಶ್ಚಿಮ ಬಂಗಾಳದಲ್ಲಿ ನಿರ್ಮಿಸಬೇಕು ಎಂಬುದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕನಸು. ಅದನ್ನು ನನಸಾಗಿಸಲು ಸುಮಾರು 200 ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.

ರಾಜಸ್ಥಾನದಿಂದ ತರಿಸಲಾದ ಕೆಂಪು ಕಲ್ಲಿನಿಂದ ಈ ದೇವಸ್ಥಾನವನ್ನು ನಿರ್ಮಿಸಲಾಗುತ್ತಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.