ಕೋಲ್ಕತ್ತ: ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮೇ 5ರಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕುರಿತು ಟಿಎಂಸಿ ಹಿರಿಯ ಮುಖಂಡ ಪಾರ್ಥ ಚಟರ್ಜಿ ಸೋಮವಾರ ಪ್ರಕಟಿಸಿದ್ದಾರೆ.

ಎಂಟು ಹಂತಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ 292 ಸ್ಥಾನಗಳ ಪೈಕಿ 212 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಮಮತಾ ಸತತ 3ನೇ ಅವಧಿಗೆ ಅಧಿಕಾರ ಉಳಿಸಿಕೊಂಡಿದ್ದಾರೆ. 77 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿರುವ ಬಿಜೆಪಿಯು ಪ್ರಮುಖ ವಿರೋಧ ಪಕ್ಷವಾಗಿ ರೂಪುಗೊಂಡಿದೆ.

ಫಲಿತಾಂಶ ಹೊರ ಬೀಳುತ್ತಿದ್ದಂತೆ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಖಡ್, ಮಮತಾ ಅವರ ಪಕ್ಷದ ಗೆಲುವಿಗೆ ಶುಭಾಶಯ ಕೋರಿ ಟ್ವೀಟಿಸಿದ್ದರು. ಹಾಗೇ, ಸೋಮವಾರ ರಾತ್ರಿ 7ಕ್ಕೆ ರಾಜ ಭವನದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದರು.

2011ರಲ್ಲಿ ಮಮತಾ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

ಈ ಚುನಾವಣೆಯಲ್ಲಿ ಮಮತಾ ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ವಿರುದ್ಧ ಸೋತಿದ್ದಾರೆ. ಭಾನುವಾರ ಪಶ್ಚಿಮ ಬಂಗಾಳ ಸೇರಿದಂತೆ ಇತರೆ ಐದು ವಿಧಾನಸಭೆಗಳ ಫಲಿತಾಂಶ ಪ್ರಕಟಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.