ಕೋಲ್ಕತ್ತ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು (ಭಾನುವಾರ) ಬೆಳಿಗ್ಗೆ 10 ಗಂಟೆ ಸುಮಾರಿಗೆ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೋಲ್ಕತ್ತದಿಂದ ಉತ್ತರಕ್ಕೆ 30 ಕಿ.ಮೀ ದೂರದಲ್ಲಿ ದತ್ತಪುಕುರ್ ಪೊಲೀಸ್ ಠಾಣಾ ವ್ಯಾಪ್ತಿಯ ನೀಲ್‌ಗಂಜ್‌ನ ಮೋಶ್‌ಪೋಲ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ.
ಗಾಯಾಳುಗಳ ಪೈಕಿ ಹೆಚ್ಚಿನವರಲ್ಲಿ ಮಹಿಳೆಯರು, ಮಕ್ಕಳು ಸೇರಿದ್ದಾರೆ.