ಕೋಲ್ಕತ್ತ: ಪಶ್ಚಿಮ ಬಂಗಾಳದ ಪಶ್ಚಿಮ ಬರ್ದ್ಮಾನ್ ಜಿಲ್ಲೆಯ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು (ಭಾನುವಾರ) ತಿಳಿಸಿದ್ದಾರೆ.

ಈವರೆಗೆ ಬಂಧಿತ ಆರೋಪಿಗಳ ವಿವರಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ.

'ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇದು ಬಹಳ ಸೂಕ್ಷ್ಮ ಪ್ರಕರಣವಾಗಿದ್ದು, ಹೆಚ್ಚಿನ ವಿವರಗಳನ್ನು ನಂತರ ನೀಡಲಾಗುವುದು' ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಒಡಿಶಾದ ಜಲೇಶ್ವರ ಮೂಲದ ಎರಡನೇ ವರ್ಷದ ವೈದ್ಯ ವಿದ್ಯಾರ್ಥಿನಿಯನ್ನು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಅರಣ್ಯ ಪ್ರದೇಶಕ್ಕೆ ಹೊತ್ತುಕೊಂಡು ಹೋಗಿ ಅತ್ಯಾಚಾರ ಎಸಲಾಗಿತ್ತು.

ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ಆವರಣದ ಹೊರಗಡೆ ಸ್ನೇಹಿತನೊಂದಿಗೆ ರಾತ್ರಿ ಊಟಕ್ಕೆ ಹೋಗಿದ್ದಾಗ ಈ ಘಟನೆ ಸಂಭವಿಸಿತ್ತು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಈ ಘಟನೆಯು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಹಾಗೂ ವಿರೋಧ ಪಕ್ಷ ಬಿಜೆಪಿ ನಡುವೆ ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ.

ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಒಡಿಶಾದ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಒತ್ತಾಯಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲೇ ಕಳೆದ ವರ್ಷ ಆರ್.ಜಿ.ಕರ್ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.
.ಪಶ್ಚಿಮ ಬಂಗಾಳ: ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ.ಉತ್ತರ ಪ್ರದೇಶದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.