ಕೋಲ್ಕತ್ತ: ಬಿಗಿ ಭದ್ರತೆಯ ನಡುವೆ ಪಶ್ಚಿಮ ಬಂಗಾಳ ಪಂಚಾಯಿತಿ ಚುನಾವಣೆಗೆ ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.
ಬೆಳಿಗ್ಗೆ 6 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಜನರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ರಾಜ್ಯದಲ್ಲಿ ಒಟ್ಟು 5.67 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ.
ಮೂರು ಹಂತದ ಪಂಚಾಯಿತಿ ವ್ಯವಸ್ಥೆಯಲ್ಲಿ 73,887 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, 2.06 ಲಕ್ಷ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಚುನಾವಣೆಗೆ ದಿನಾಂಕ ಘೋಷಣೆಯಾದಂತೆ ಈವರೆಗೆ ಸಂಭವಿಸಿದ ಹಿಂಸಾಚಾರದಲ್ಲಿ 15ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ರಾಜ್ಯದ 70 ಸಾವಿರ ಪೊಲೀಸ್ ಸಿಬ್ಬಂದಿ ಜೊತೆಗೆ ಕನಿಷ್ಠ 600 ತುಕಡಿ ಕೇಂದ್ರ ಪಡೆಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
63,229 ಗ್ರಾಮ ಪಂಚಾಯಿತಿ, 22 ಜಿಲ್ಲೆಗಳ 9,730 ಪಂಚಾಯಿತಿ ಸಮಿತಿ ಮತ್ತು 20 ಜಿಲ್ಲೆಗಳ 928 ಜಿಲ್ಲಾ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.